Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕಾರ್ಮಿಕರ ಕನಿಷ್ಠ ವೇತನ ರಾಜ್ಯ ಸರ್ಕಾರದಿಂದ ಪರಿಷ್ಕೃತ ಅಧಿಸೂಚನೆ

ಕಾರ್ಮಿಕರ ಕನಿಷ್ಠ ವೇತನ ದರ ಹೆಚ್ಚಿಸಿದ ಕೇಂದ್ರ ಸರ್ಕಾರ

Hosashake News by Hosashake News
April 13, 2025
in ಜಿಲ್ಲೆ, ದೇಶ, ರಾಜ್ಯ, ಸುದ್ದಿ
0
ಕಾರ್ಮಿಕರ ಕನಿಷ್ಠ ವೇತನ ರಾಜ್ಯ ಸರ್ಕಾರದಿಂದ ಪರಿಷ್ಕೃತ ಅಧಿಸೂಚನೆ
Share on FacebookShare on Twitter

ಬೆಂಗಳೂರು: ವಿವಿಧ ಕೌಶಲ ಸಹಿತ ಮತ್ತು ಕೌಶಲ ರಹಿತ ಕಾರ್ಮಿಕರ ಕನಿಷ್ಠ ವೇತನಕ್ಕೆ ಸಂಬಂಧಿಸಿದಂತೆ ಕಾರ್ಮಿಕರ ಇಲಾಖೆ ಪರಿಷ್ಕೃತ ಅಧಿಸೂಚನೆಗಳನ್ನು ಹೊರಡಿಸಿದ್ದು, ಇತರ ವಲಯಗಳಲ್ಲಿ, ಅತಿ ಕೌಶಲ ಕೆಲಸಗಾರರಿಗೆ ಕನಿಷ್ಠ ದೈನಂದಿನ ವೇತನ ರೂ 1,196.69 ರಿಂದ ರೂ. 989 ರಷ್ಟಿರುತ್ತದೆ ಆದರೆ ಕೌಶಲ ರಹಿತ ಕೆಲಸಗಾರರು ದಿನಕ್ಕೆ ರೂ 743 ರಿಂದ ರೂ 899.09 ರವರೆಗಿನ ವೇತನಕ್ಕೆ ಅರ್ಹರಾಗಿರುತ್ತಾರೆ.ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ.

ಪರಿಷ್ಕೃತ ಅಧಿಸೂಚನೆ ಪ್ರಕಾರ, ಶೌಚಾಲಯ, ಸ್ನಾನಗೃಹಗಳು, ಒಳ ಚರಂಡಿಗಳನ್ನು ಶುಚಿ ಮಾಡುವ ಕೆಲಸಗಾರರಿಗೆ ದಿನಕ್ಕೆ ರೂ. 989, ತಿಂಗಳಿಗೆ ರೂ. 21,251.30 ಆಗಿದೆ. ಅತಿ ಕುಶಲ ಎಲೆಕ್ಟ್ರಿಷಿಯನ್‌ಗಳಿಗೆ ದಿನಗೂಲಿ ದಿನಕ್ಕೆ 1,316 ಆಗಿದ್ದು, ತಿಂಗಳಿಗೆ ರೂ. 34,225. 42 ಆಗಿದೆ. ನುರಿತ ಎಲೆಕ್ಟ್ರಿಷಿಯನ್‌ಗಳಿಗೆ ದಿನಗೂಲಿ 1,196.69 ಮತ್ತು ತಿಂಗಳಿಗೆ 31,114.02 ರೂ. ಆಗಿದೆ. ಅರೆ ಕುಶಲ ಕಾರ್ಮಿಕರಿಗೆ ದಿನಕ್ಕೆ ರೂ. 1,087.90 ಆಗಿದ್ದು, ತಿಂಗಳಿಗೆ 28,285 ರೂ. ಆಗಿದೆ.

ಸದರಿ ಅಧಿಸೂಚನೆಗಳನ್ನು ಎಐಟಿಯುಸಿ ಕಾರ್ಮಿಕ ಸಂಘದವರು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಪ್ರಶ್ನಿಸಿದ್ದರಿಂದ ಅದನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಸುಪ್ರೀಂಕೋರ್ಟ್ ನೀಡಿರುವ ಮಾರ್ಗಸೂಚಿಗಳ ಅನ್ವಯ ಕನಿಷ್ಠ ವೇತನ ಲೆಕ್ಕಾಚಾರ ಹಾಕಿ ಹೊಸದಾಗಿ ಅಧಿಸೂಚನೆ ಹೊರಡಿಸುವಂತೆ ನಿರ್ದೇಶಿಸಲಾಗಿತ್ತು.

ಕರ್ನಾಟಕ ರಾಜ್ಯದಾದ್ಯಂತ ಕನಿಷ್ಠ ವೇತನ ಕಾಯ್ದೆ 1984ರ ಕಲಂ 5(1) (ಎ) ಹಾಗೂ 5(1) ಬಿ ರಡಿ ಇದುವರೆಗೂ 81 ಅಧಿಸೂಚಿತ ಉದ್ದಿಮೆಗಳಿಗೆ ಪ್ರತ್ಯೇಕವಾದ ವೇತನ ದರಗಳನ್ನು ನಿಗದಿಪಡಿಸಿ, ಪರಿಷ್ಕರಿಸಿ ಅಧಿಸೂಚನೆ ಹೊರಡಿಸಲಾಗುತಿತ್ತು. 2022-23ನೇ ಸಾಲಿನಲ್ಲಿ ವಿವಿಧ ಅನುಸೂಚಿತ ಉದ್ದಿಮೆಗಳಿಗೆ ಸಂಬಂಧಿಸಿದ ಒಟ್ಟು 34 ಅನುಸೂಚಿತ ಉದ್ದಿಮೆಗಳಿಗೆ ಸದರಿ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಕನಿಷ್ಠ ವೇತನಕ್ಕೆ ಹೆಚ್ಚುವರಿಯಾಗಿ ಶೇ. 5 ರಿಂದ 10 ರಷ್ಟು ಏರಿಕೆ ಮಾಡಿದ ದರಗಳನ್ನು ಪರಿಷ್ಕರಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಕಾರ್ಮಿಕರ ಕನಿಷ್ಠ ವೇತನ ದರ ಹೆಚ್ಚಿಸಿದ ಕೇಂದ್ರ ಸರ್ಕಾರ: ವಿವಿಧ ಅನುಸೂಚಿತ ಉದ್ದಿಮೆಗಳಲ್ಲಿ ವಲಯವಾರು ಹಾಗೂ ಕುಶಲವಾರು ವೇತನ ದರದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಹಾಗೂ ಎಲ್ಲಾ ವರ್ಗದ ಕಾರ್ಮಿಕರಿಗೂ ಸಮಾನವಾದ ಕನಿಷ್ಠ ವೇತನ ದೊರೆಯಬೇಕೆಂಬ ಸದುದ್ದೇಶದಿಂದ ಈ ಹಿಂದೆ ಅನುಸೂಚಿತ ಉದ್ದಿಮೆವಾರು ಪ್ರತ್ಯೇಕವಾಗಿ ಅಧಿಸೂಚನೆಗಳನ್ನು ಹೊರಡಿಸುತ್ತಿದ್ದ ಕ್ರಮದ ಬದಲಾಗಿ ಏಕರೂಪ ಅಧಿಸೂಚನೆ ಹೊರಡಿಸಿದೆ

Tags: Bangalore NewsKarnataka Minimum wage for workers revised notificationMinimum wage for workers revised notification by state governmentಕಾರ್ಮಿಕರ ಕನಿಷ್ಠ ವೇತನ ರಾಜ್ಯ ಸರ್ಕಾರದಿಂದ ಪರಿಷ್ಕೃತ ಅಧಿಸೂಚನೆ
Previous Post

ಭತ್ತದ ಬೆಳೆ ಹಾನಿ : ಬಿಜೆಪಿ ಮುಖಂಡರ ಭೇಟಿ, ಪರಿಹಾರಕ್ಕೆ ಒತ್ತಾಯ

Next Post

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ. ಆರ್. ಅಂಬೇಡ್ಕರ್

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!