Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಯಶಸ್ವಿನಿ ಯೋಜನೆ : ದರ ಪರಿಷ್ಕರಣೆ ಸಮಿತಿಯಿಂದ  ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಸಲ್ಲಿಕೆ

Hosashake News by Hosashake News
April 22, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜ್ಯ, ಶಿಕ್ಣಣ-ಆರೋಗ್ಯ, ಸುದ್ದಿ
0
ಯಶಸ್ವಿನಿ ಯೋಜನೆ : ದರ ಪರಿಷ್ಕರಣೆ ಸಮಿತಿಯಿಂದ  ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಸಲ್ಲಿಕೆ
Share on FacebookShare on Twitter

ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ ಶ್ರೀನಿವಾಸ ಎನ್ ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ‌ ಶಿಫಾರಸ್ಸುಗಳನ್ನು ಸಲ್ಲಿಸಿತು

ಪ್ರಸ್ತುತ ಯಶಸ್ಸಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿಲ್ಲ.

ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು   ಶಾಸಕರಾದ ಡಾ|| ಶ್ರೀನಿವಾಸ್ ಎನ್. ಟಿ ಇವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿದೆ. ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿ-ಗತಿಗಳಿಗೆ ಅನುಗುಣವಾಗಿ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿರುತ್ತದೆ.

ಸಮಿತಿಯಲ್ಲಿ ಹೆಸರಾಂತ ಪ್ರತಿಷ್ಠಿತ ಆಸ್ಪತ್ರೆಗಳ 8 ತಜ್ಞ ವೈದ್ಯರಲ್ಲದೇ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಿ ಅವರುಗಳ ಸಲಹೆ ಸೂಚನೆಗಳನ್ನು ಪಡೆದು ದರ ಪರಿಷ್ಕರಣೆ ಮಾಡಲಾಗಿದೆ. ಈಗಿನ ಯಶಸ್ವಿನಿ ಯೋಜನೆಯಲ್ಲಿ 2128 ಚಿಕಿತ್ಸೆಗಳನ್ನು ಅಳವಡಿಸಿಕೊಂಡಿದ್ದು ಪ್ರಸ್ತುತ ಇರುವ ಚಿಕಿತ್ಸೆಗಳ ಪೈಕಿ 6  ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಕೈಬಿಡಲಾಗಿದೆ.

ಅದೇ ರೀತಿ ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸದಾಗಿ ಪ್ರವರ್ಧಮಾನಕ್ಕೆ ಬಂದಿರುವ ಚಿಕಿತ್ಸೆಗಳ ಪೈಕಿ ಸಹಕಾರಿಗಳಿಗೆ / ರೈತಾಪಿ ವರ್ಗಕ್ಕೆ Interventional Radiology, CTVS, ಕ್ಯಾನ್ಸರ್ ಕಾಯಿಲೆಗಳು ಮುಂತಾದ ವಿಭಾಗಗಳ ಒಟ್ಟು 69 ಹೊಸ ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಸೇರಿಸಲಾಗಿದೆ.

ಇದರಿಂದಾಗಿ ಒಟ್ಟು 2191 ಚಿಕಿತ್ಸೆಗಳನ್ನು ಅಂತಿಮಗೊಳಿಸಿದಂತಾಗಿದೆ. ಯಶಸ್ವಿನಿ ಯೋಜನೆಯಡಿ 2024-25ರಲ್ಲಿ 68,159 ಫಲಾನುಭವಿಗಳು ರೂ.117.79 ಕೋಟಿ ಮೊತ್ತದ ಚಿಕಿತ್ಸೆಯನ್ನು ಪಡೆದಿದ್ದು ಸರಾಸರಿ ಒಂದು ಚಿಕಿತ್ಸಾ ವೆಚ್ಚ ರೂ.17,000 ಆಗಿದೆ. ಮುಂದಿನ ಸಾಲಿನಲ್ಲಿ ಸುಮಾರು 75,000 ಫಲಾನುಭವಿಗಳು ಚಿಕಿತ್ಸೆ ಪಡೆಯುವ ಅಂದಾಜಿದ್ದು ಅದರಂತೆ ಸುಮಾರು ರೂ.127.50 ಕೋಟಿ ವೆಚ್ಚ ಆಗಲಿದೆ.

ಆರೋಗ್ಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉನ್ನತ ಮಟ್ಟದ ಚಿಕಿತ್ಸೆಗಳನ್ನು ಹೊಸದಾಗಿ ಸೇರಿಸುವುದರಿಂದ ಸರಾಸರಿ ಚಿಕಿತ್ಸಾ ದರದಲ್ಲಿ 50% ರಿಂದ 55% ರ ವರವಿಗೆ ದರ ಹೆಚ್ಚಳವಾಗುವ ಅಂದಾಜಿದ್ದು ಅದರಂತೆ ಸುಮಾರು ರೂ.70.00 ಕೋಟಿ ರವರೆಗೆ ದರ ಹೆಚ್ಚಳವಾಗುವ ಅಂದಾಜು ಇದ್ದು ಇದರಿಂದ ರೂ.62.50 ಕೋಟಿ ಯಿಂದ 68.75 ಕೋಟಿ ಹೆಚ್ಚಿನ ಹೊರೆ ಬೀಳುವ ಸಂಭವವಿರುತ್ತದೆ

ಈ ಹೆಚ್ಚಳವಾಗುವ ಸುಮಾರು ರೂ.70.00 ಕೋಟಿ ಅಧಿಕ ಆರ್ಥಿಕ ಹೊರೆಯನ್ನು ಸರ್ಕಾರದಿಂದ ರೂ.40.00 ಕೋಟಿ ಹೆಚ್ಚುವರಿ ಅನುದಾನವನ್ನು ಒದಗಿಸುವ ಮೂಲಕ ಮತ್ತು ಸದಸ್ಯರು ಪಾವತಿಸುವ ವಂತಿಗೆ ಮೊತ್ತದಿಂದ ರೂ.30.00 ಕೋಟಿಯನ್ನು ಭರಿಸುವ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಬಹುದೆಂದು ವರದಿ ತಿಳಿಸಿದೆ.

Tags: Hosashake News Karnataka KoppalYashaswini Scheme: Rate Revision Committee submits recommendation to Chief Ministersಯಶಸ್ವಿನಿ ಯೋಜನೆ : ದರ ಪರಿಷ್ಕರಣೆ ಸಮಿತಿಯಿಂದ  ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಸಲ್ಲಿಕೆಶಾಸಕರಾದ ಡಾ ಶ್ರೀನಿವಾಸ ಎನ್ ಟಿ
Previous Post

ಆನೆಗುಂದಿಯಲ್ಲಿರುವ ಕೃಷ್ಣದೇವರಾಯ ಸಮಾಧಿ ಸ್ಥಳಕ್ಕೆ ಸಚಿವ ಎಚ್.ಕೆ ಪಾಟೀಲರ ಭೇಟಿ

Next Post

ಏ.26 ರಂದು ಡಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಯಾನ – ಅಲ್ಲಮಪ್ರಭು ಬೆಟ್ಟದೂರ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!