Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಏ.26 ರಂದು ಡಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಯಾನ – ಅಲ್ಲಮಪ್ರಭು ಬೆಟ್ಟದೂರ

Hosashake News by Hosashake News
April 22, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ
0
ಏ.26 ರಂದು ಡಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಯಾನ – ಅಲ್ಲಮಪ್ರಭು ಬೆಟ್ಟದೂರ
Share on FacebookShare on Twitter

ಹೊಸಶಕೆ ನ್ಯೂಸ್ -ಕೊಪ್ಪಳ: ರಾಜ್ಯದ ಪ್ರತಿ ಊರು ಕೇರಿ, ಹಾಡಿ, ಮೊಹಲ್ಲಾಗಳಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಯಾನಕ್ಕೆ ಚಾಲನೆ ನೀಡಲು ಏ.26 ರಂದು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಕರ ಸಮಾವೇಶದ ಜಿಲ್ಲಾ ಮುಖಂಡರಾದ  ಅಲ್ಲಮಪ್ರಭು ಬೆಟ್ಟದೂರ ಹೇಳಿದರು.

ಪತ್ರಿಕಾ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಕೇಂದ್ರ ಸರ್ಕಾರವು ಕಾರ್ಪೋರೇಟ್ ಹಾಗೂ ಮನುವಾದಿ ಶಕ್ತಿಗಳ ರೀತಿ ಕೆಲಸ ಮಾಡುತ್ತಿದೆ. ನೂರು ವರ್ಷಗಳ ಹಿಂದೆ ಜರ್ಮನಿಯನ್ನು ಹಾಗೂ ಜಗತ್ತನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಫ್ಯಾಸಿಟ್ ಹಿಟ್ಲರ್ ಬಳಸಿದ ತಂತ್ರಗಾರಿಕೆಯನ್ನು ಈಗ ಭಾರತದಲ್ಲಿ ಪ್ರಯೋಗಿಸಲಾಗುತ್ತಿದೆ, ವಿವಿಧ ಜನ ವರ್ಗಗಳಿಗೆ ಸಂವಿಧಾನ ಕೊಟ್ಟಿದ್ದ ಹಕ್ಕುಗಳಿಗೆ ತದ್ವಿರುದ್ಧ ದಿಕ್ಕಿನಲ್ಲಿ ಕಾನೂನುಗಳನ್ನು ರೂಪಿಸಿ ತನ್ನ ಕಾರ್ಪೋರೇಟ್ ಬಳಗವನ್ನು ಬೆಳೆಸಲಾಗುತ್ತಿದೆ ಎಂದರು.

ನಾಗರೀಕ ಮಟ್ಟದಿಂದ ದೇಶ ಮಟ್ಟದ ತನಕ ನಮ್ಮನ್ನು ನಾವು ಕಟ್ಟಿಕೊಳ್ಳಬೇಕಿದೆ, ಈ ಗುರಿಯೊಂದಿಗೆಯೇ ಪ್ರತಿ ಊರು, ಕೇರಿ, ಹಾಡಿ, ಬೀದಿಗಳಲ್ಲಿ, “ಸಂವಿಧಾನ ಸಂರಕ್ಷಕ ಪಡೆ” ಹೆಸರಿನಲ್ಲಿ ದೇಶಪ್ರೇಮಿ ತಂಡಗಳನ್ನು ಕಟ್ಟುವ ಪ್ರಕ್ರಿಯೆಗೆ ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದ ಹೈಸ್ಕೂಲ್ ಫೀಲ್ಡ್ ಬಳಿ ಸಂವಿಧಾನ ಸಂರಕ್ಷಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ, ಮುಂದಿನ ಮೂರು ವರ್ಷಗಳಲ್ಲಿ ಒಂದು ಲಕ್ಷ ಕಾರ್ಯಕರ್ತರ ಪಡೆಯನ್ನು ಸಜ್ಜುಗೊಳಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶದ  ಜಿಲ್ಲಾ ಸಂಯೋಜಕರಾದ ಮುದುಕಪ್ಪ ಹೊಸಮನಿ, ದುರ್ಗೇಶ್ ಬರಗೂರು, ರಾಜು ನಾಯಕ್, ಸಿರಾಜ್ ಸಿದ್ದಾಪುರ, ಚನ್ನಬಸಪ್ಪ ಗಾಳೆಪ್ಪ ಮುಂಗೋಲಿ ಇತರರು ಇದ್ದರು.

Tags: Hosashake News Mahayana to build Constitution Protection Force in Davangere on April 26 - Allama Prabhu BettadoorMahayana to build Constitution Protection Force in Davangere on April 26 - Allama Prabhu Bettadoorಏ.26 ರಂದು ಡಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಯಾನ - ಅಲ್ಲಮಪ್ರಭು ಬೆಟ್ಟದೂರ
Previous Post

ಯಶಸ್ವಿನಿ ಯೋಜನೆ : ದರ ಪರಿಷ್ಕರಣೆ ಸಮಿತಿಯಿಂದ  ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಸಲ್ಲಿಕೆ

Next Post

ಮಹನಿಯರ ಜಯಂತಿಗಳಿಗೆ ಅಗತ್ಯ ಸಿದ್ಧತೆ :  ತಹಶಿಲ್ದಾರ ರಜನಿಕಾಂತ್

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!