Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಮಹನಿಯರ ಜಯಂತಿಗಳಿಗೆ ಅಗತ್ಯ ಸಿದ್ಧತೆ :  ತಹಶಿಲ್ದಾರ ರಜನಿಕಾಂತ್

ಶಂಕರಾಚಾರ್ಯ, ಭಗೀರಥ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿ: ಪೂರ್ವಭಾವಿ ಸಭೆ

Hosashake News by Hosashake News
April 22, 2025
in ಜಿಲ್ಲೆ, ದೇಶ, ರಾಜ್ಯ, ಸಾಮಾಜಿಕ, ಸುದ್ದಿ
0
ಮಹನಿಯರ ಜಯಂತಿಗಳಿಗೆ ಅಗತ್ಯ ಸಿದ್ಧತೆ :  ತಹಶಿಲ್ದಾರ ರಜನಿಕಾಂತ್
Share on FacebookShare on Twitter

ಹೊಸಶಕೆ ನ್ಯೂಸ್ -ಕೊಪ್ಪಳ : ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಮೇ.2 ರಂದು ಶ್ರೀ ಶಂಕರಾಚಾರ್ಯ ಜಯಂತಿ ಮತ್ತು ಮೇ.4 ರಂದು ಶ್ರೀ ಭಗೀರಥ ಜಯಂತಿ ಹಾಗೂ ಮೇ. 10 ರಂದು ಶ್ರೀ ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಎಲ್ಲಾ ಮಹನಿಯರ ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಹಾಯಕ ಆಯುಕ್ತರ ಕಚೇರಿಯ ತಹಶಿಲ್ದಾರ ರಜನಿಕಾಂತ್ ಹೇಳಿದರು.

ಮಂಗಳವಾರ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮಹನಿಯರ ಜಯಂತಿ ಆಚರಣೆ ಕುರಿತಂತೆ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು  ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ತಾಲ್ಲೂಕು ಕೇಂದ್ರಗಳಲ್ಲಿ ಮತ್ತು ಗ್ರಾಮ ಪಂಚಾಯತಗಳಲ್ಲಿ, ಶಾಲಾ, ಕಾಲೇಜು ವಸತಿ ನಿಲಯಗಳಲ್ಲಿ ಈ ಎಲ್ಲಾ ಮಹನಿಯರ ಜಯಂತಿಗಳನ್ನು ಕಡ್ಡಾಯವಾಗಿ ಆಚರಣೆ ಮಾಡಬೇಕಾಗಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸುರೇಶ ಜಿ., ಆರೋಗ್ಯ ಇಲಾಖೆಯ ಶಿವಾನಂದ ವ್ಹಿ.ಪಿ, ಶ್ರೀ ಶಂಕರಾಚಾರ್ಯ ಸಮಾಜದ ಜಿಲ್ಲಾಧ್ಯಕ್ಷರಾದ ಡಿ.ವಿ ಜೋಷಿ, ಸಮಾಜದ ಮುಖಂಡರಾದ ರವಿ ಪುರೋಹಿತ, ರಮೇಶ, ಕೆ., ಅಶೋಕ, ವಿ ಮತ್ತು ರೆಡ್ಡಿ ಸಮಾಜದ ಮುಖಂಡರಾದ ಹನುಮ ರೆಡ್ಡಿ, ಶಂಕರಗೌಡ, ಕಾಶೀನಾಥ್ ರೆಡ್ಡಿ, ವಿರೂಪಾಕ್ಷಪ್ಪ, ನಾಗರಾಜ, ಹಾಗೂ ಭಗೀರಥ ಸಮಾಜದ ಜಿಲ್ಲಾಧ್ಯಕ್ಷರಾದ ಯಲ್ಲಪ್ಪ ಗದ್ದಿ, ಮುಖಂಡರಾದ ವೆಂಕಟೇಶ ಬ್ಯಾಡಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags: Bhagiratha and Hemareddy Mallamma Jayanti: Preparatory meetingKoppal Karnatak Make necessary preparations for Mahaniyar Jayanti: AC Office Tahsildar RajinikanthShankaracharyaಭಗೀರಥ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿ: ಪೂರ್ವಭಾವಿ ಸಭೆಶಂಕರಾಚಾರ್ಯ
Previous Post

ಏ.26 ರಂದು ಡಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಯಾನ – ಅಲ್ಲಮಪ್ರಭು ಬೆಟ್ಟದೂರ

Next Post

ಹೊಸಶಕೆ ದಿನಪತ್ರಿಕೆ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಪತ್ರಿಕಾ ವಿತರಕ ಮೆಹಬೂಬ್ ಮನಿಯಾರ್ ಗೆ ಪತ್ರಿಕಾ ದಿನಾಚರಣೆಯಲ್ಲಿ ವಿಶೇಷ ಸನ್ಮಾನ

ಕಾರ್ಪೋರೇಟ್ ಶವಪೆಟ್ಟಿಗೆಯಿಂದ ಪತ್ರಿಕಾ ವೃತ್ತಿಯನ್ನು ಹೊರತರಬೇಕಿದೆ: ಕೆ.ವಿ.ಪ್ರಭಾಕರ್

ಹೊಸಶಕೆ ದಿನಪತ್ರಿಕೆ

ಬಳ್ಳಾರಿಯಲ್ಲಿಯೇ ಮೆಗಾಡೇರಿ ನಿರ್ಮಾಣ ನೂತನ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್

ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ  ನಡೆದಿದೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ರ್ಯಾಲಿ

ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಜೆಡಿಎಸ್ ನಾಯಕ ಸಿ ವಿ ಚಂದ್ರಶೇಖರ್ ಭೇಟಿ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!