Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ: ಸಿದ್ದರಾಮಯ್ಯ

ಹುಬ್ಬಳ್ಳಿಯಲ್ಲಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಜನತಾ ಸಮಾವೇಶದಲ್ಲಿ

Hosashake News by Hosashake News
May 1, 2025
in ಜಿಲ್ಲೆ, ದೇಶ, ರಾಜಕೀಯ, ರಾಜ್ಯ, ಸುದ್ದಿ
0
ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ: ಸಿದ್ದರಾಮಯ್ಯ
Share on FacebookShare on Twitter

*ಕೊಟ್ಟ ಮಾತನ್ನು ತಪ್ಪಿ ನಡೆದು ಸುಳ್ಳುಗಳಿಂದ ಭಾರತೀಯರನ್ನು ಮರಳು ಮಾಡುವುದರಲ್ಲಿ ಮೋದಿ ನಿಸ್ಸೀಮರು: ಸಿ.ಎಂ ಸಿದ್ದರಾಮಯ್ಯ ವ್ಯಂಗ್ಯ*

*ಕಾಂಗ್ರೆಸ್ ಪಕ್ಷದ ಜಾತಿ ಗಣತಿಗೆ ಕೇಂದ್ರ ಸರ್ಕಾರ ಒಪ್ಪಿಗೆ: ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯವರ ಹೋರಾಟಕ್ಕೆ ಸಿಕ್ಕ ಮಾನ್ಯತೆ: ಸಿ.ಎಂ*

*ರಾಹುಲ್ ಗಾಂಧಿ ಹೋರಾಟಕ್ಕೆ ಬಗ್ಗಿದ ಕೇಂದ್ರ ಸರ್ಕಾರ: ಸಿಎಂ ಮೆಚ್ಚುಗೆ*

ಹೊಸಶಕೆ ನ್ಯೂಸ್-ಕೊಪ್ಪಳ: ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ದೇಶ ವಿರೋಧಿ ವರ್ತನೆ, ಜನ ವಿರೋಧಿ ಆಡಳಿತ ಮತ್ತು ಬೆಲೆ ಏರಿಕೆಯ ಜನದ್ರೋಹವನ್ನು ಖಂಡಿಸಿ ನಡೆದ ಜನತಾ ಸಮಾವೇಶದಲ್ಲಿ ಮಾತನಾಡಿದರು.

ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಅಕ್ಕಿಯಿಂದ ಚಿನ್ನದವರೆಗೂ ಎಲ್ಲದರ ಬೆಲೆ ಆಕಾಶಕ್ಕೆ ಏರಿದೆ. ದೇಶದ, ರಾಜ್ಯದ ಜನರಿಗೆ ಬಿಜೆಪಿ ಪರಿವಾರದ ಈ ಜನದ್ರೋಹ ಅರ್ಥವಾಗಿದೆ. ಇದನ್ನು ಮರೆ ಮಾಚಲು ತಮ್ಮ ಜನದ್ರೋಹವನ್ನು ಮುಚ್ಚಿಕೊಳ್ಳಲು ದೇಶದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದರು.

ಉಪ್ಪು, ಸಕ್ಕರೆ, ಟೀ, ಕಾಫಿ, ಅಕ್ಕಿ, ಬೇಳೆ, ಎಣ್ಣೆ, ಕಾಳು, ಚಿನ್ನ, ಬೆಳ್ಳಿ, ರಸಗೊಬ್ಬರ, ಔಷಧ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸೇರಿ ಎಲ್ಲದರ ಬೆಲೆ ಆಕಾಶಕ್ಕೆ ಏರಿಸಿರುವ ಮೋದಿಯವರೇ ನೀವು ಯಾವುದನ್ನು ತಾನೆ ಬಿಟ್ಟಿದ್ದೀರಿ ಎಂದರು.

ಡಾಲರ್ ಬೆಲೆ 2014 ರಲ್ಲಿ 59 ರೂಪಾಯಿ ಇತ್ತು. ಇವತ್ತು 86 ರೂಪಾಯಿ ಆಗಿದೆ. ಇದಕ್ಕೆ ಯಾರು ಕಾರಣರು ಮೋದಿಯವರೇ ? ಇದೇನಾ ನಿಮ್ಮ ಅಚ್ಛೆ ದಿನ್ ಎಂದು ವ್ಯಂಗ್ಯವಾಡಿದರು.

50 ಕೆಜಿ ಸಿಮೆಂಟ್ ಬೆಲೆ 2014 ರಲ್ಲಿ 200 ಇದ್ದದ್ದು ಈಗ 450 ರೂ ಆಗಿದೆ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 425 ಇದ್ದದ್ದು ಇಂದು 850 ದಾಟಿದೆ. ಶೇ100 ರಷ್ಟು ಬೆಲೆ ಏರಿಕೆ ಮಾಡಿದ್ದೀರಿ. ಜನದ್ರೋಹದ ಪರಮಾವಧಿ ಮುಂದುವರೆಸಿ ಸಿಲಿಂಡರ್ ಸಬ್ಸಿಡಿ ತೆಗೆದು ಹಾಕಿ ಬಡವರ ಮತ್ತು ಮಧ್ಯಮ ವರ್ಗದವರ ವಿರೋಧಿ ಆಗಿರುವ ಮೋದಿಯವರೇ ನಿಮ್ಮ ವಂಚನೆಗೆ ಕೊನೆಯೇ ಇಲ್ಲವೇ ಎಂದು ಪ್ರಶ್ನಿಸಿದರು.

ಪ್ರಹ್ಲಾದ್ ಜೋಶಿಯವರೇ ನೀವು ಮತ್ತು ಮೋದಿಯವರು ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಲೇ ಇದ್ದೀರಿ. ಆದರೆ, ನಿಮ್ಮ ಚಾಳಿಯನ್ನು ನಮ್ಮ ಮೇಲೆ ಹೊರಿಸಲು ಯತ್ನಿಸುತ್ತಿದ್ದೀರಿ.‌ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಹಾಲಿನ ದರ 4ರೂ ಹೆಚ್ಚಿಸಿ ಇಷ್ಟೂ ಹಣವನ್ನೂ ರೈತರಿಗೆ ವರ್ಗಾಯಿಸಿದ್ದೀವಿ. ಇದರಲ್ಲಿ ಹತ್ತು ಪೈಸೆ ಕೂಡ ಸರ್ಕಾರಕ್ಕೆ ಬರುವುದಿಲ್ಲ. ಆದರೆ, ನೀವು ಹೆಚ್ಚಿಸಿದ ಬೆಲೆ ಏರಿಕೆ ಯಾವ ಭಾರತೀಯರಿಗೆ ಸಿಗುತ್ತಿದೆ ಹೇಳಿ ಎಂದರು.

ಸಂವಿಧಾನ ಜಾರಿಯಾಗಿ 75 ವರ್ಷ ಕಳೆದರೂ ಅಸಮಾನತೆ, ತಾರತಮ್ಯ ಹೋಗಿಲ್ಲ ಎಂದರು.

ಆದ್ದರಿಂದ ನಾವು ನಮ್ಮ ಪ್ರಣಾಳಿಕೆಯಲ್ಲಿ ಆರ್ಥಿಕ, ಸಾಮಾಜಿಕ, ಜಾತಿ ಗಣತೆ ಬಗ್ಗೆ ಭರವಸೆ ಕೊಟ್ಟಿದ್ದೆವು. ನಾವು ಮಾಡಿದ ಘೋಷಣೆಯಂತೆ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಮತ್ತು ರಾಹುಲ್ ಗಾಂಧಿಯವರು ಪಾರ್ಲಿಮೆಂಟಿನಲ್ಲಿ ನಿರಂತರ ಧ್ವನಿ ಎತ್ತಿ ಹೋರಾಟ ನಡೆಸಿದ್ದರು. ಇದರ ಪರಿಣಾಮ ಈಗ ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮಣಿದಿದೆ. ಇದು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ಸೈದ್ಧಾಂತಿಕ ಬದ್ಧತೆಗೆ ಸಿಕ್ಕ ಗೆಲುವು ಎಂದರು.

Tags: CM Karnataka Hubballi newsಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ: ಸಿದ್ದರಾಮಯ್ಯ
Previous Post

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ರಾಜ್ಯ ಉಪಾಧ್ಯಕ್ಷರಾಗಿ ಪ್ರಾಣೇಶ ಮಾದಿನೂರ ನೇಮಕ

Next Post

ಮೇ. 20 ರಿಂದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರಾಮಹೋತ್ಸವ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!