Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ದೇಶ

ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಹೊಸಪೇಟೆಯಲ್ಲಿ ಪ್ರಗತಿಯತ್ತ ಕರ್ನಾಟಕ- ಸಮರ್ಪಣೆ ಸಂಕಲ್ಪ" ಸಮಾವೇಶ

Hosashake News by Hosashake News
May 20, 2025
in ದೇಶ, ಪ್ರಾದೇಶಿಕ, ರಾಜಕೀಯ, ರಾಜ್ಯ, ಸುದ್ದಿ
0
ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು  ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ
Share on FacebookShare on Twitter

ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ

ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆ

ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಅಷ್ಟೂ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಂಗಳವಾರ ಆಯೋಜಿಸಿದ್ದ “ಪ್ರಗತಿಯತ್ತ ಕರ್ನಾಟಕ- ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು

ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ?ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು.

ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ.

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ ಎಂದು ಹೇಳಿದರು15 ನೇ ಹಣಕಾಸು ಆಯೋಗದ ಕಾಲದಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ₹5,300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ.

ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಬಹುಮತ ಗಳಿಸಿ ಆಯ್ಕೆಯೇ ಆಗಿಲ್ಲ.

ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ.1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ.

2014 ರಲ್ಲಿ ₹28,000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ ₹414 ಇದ್ದದ್ದು ಈಗ ₹850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ವಿರುದ್ಧ ಅಲ್ಲ. ಜನ ನಮ್ಮ ಪರವಾಗಿಯೇ ಇದ್ದಾರೆ.ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದು ಜರಿದರು.

ನಾಡಿನ ಮತದಾರರ ಆಶೀರ್ವಾದದಿಂದ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರಕ್ಕೆ ಇಂದಿಗೆ ಎರಡು ವರ್ಷಗಳ ಸಂಭ್ರಮ. ಇದರ ಅಂಗವಾಗಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದ್ದ ” ಪ್ರಗತಿಯತ್ತ ಕರ್ನಾಟಕ – ಸಮರ್ಪಣೆ ಸಂಕಲ್ಪ” ಬೃಹತ್ ಜನಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಪಾಲ್ಗೊಂಡು, ಜನತೆಗೆ ಧನ್ಯವಾದ ಸಲ್ಲಿಸಿದರು.

ಸಮಾವೇಶದಲ್ಲಿ ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ, ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದರಾದ ರಣದೀಪ್ ಸಿಂಗ್ ಸುರ್ಜೇವಾಲಾ, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ|| ಶಾಲಿನಿ ರಜನೀಶ್, ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ಸೇರಿದಂತೆ ಹಲವು ಮಂದಿ ಸಚಿವರು, ಶಾಸಕರು, ಹಿರಿಯ ನಾಯಕರು, ಗಣ್ಯರು ಉಪಸ್ಥಿತರಿದ್ದು, ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

==ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ.: ಸಿದ್ದರಾಮಯ್ಯ, ಮುಖ್ಯಮಂತ್ರಿಗಳು===

 

Tags: 11111 ಮಂದಿಗೆ ಹಕ್ಕುಪತ್ರ ವಿತರಣೆAICC President Mallikarajan KhargeCM Karnataka Siddaramyy Hosapet ProgaramCM ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆCongerss Rahula Gandhi HosapetHosapet ಸಮಾವೇಶದಲ್ಲಿ 1
Previous Post

ಹೊಸಶಕೆ ದಿನಪತ್ರಿಕೆ

Next Post

ಮಳೆಯಿಂದ ತೊಂದರೆ:  ಸಹಾಯವಾಣಿ ಆರಂಭ:-ಮುಖ್ಯಾಧಿಕಾರಿ ನಾಗೇಶ್

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಬಳ್ಳಾರಿಯಲ್ಲಿಯೇ ಮೆಗಾಡೇರಿ ನಿರ್ಮಾಣ ನೂತನ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್

ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ  ನಡೆದಿದೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ರ್ಯಾಲಿ

ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಜೆಡಿಎಸ್ ನಾಯಕ ಸಿ ವಿ ಚಂದ್ರಶೇಖರ್ ಭೇಟಿ

ಕೊಪ್ಪಳ : ಕೊಲೆಯಾದ ಗವಿಸಿದ್ಧಪ್ಪನ ಮನೆಗೆ ಮುಸ್ಲಿಂ ಸಮಾಜದ ಮುಖಂಡರ ಭೇಟಿ

ಅಗ್ನಿವೀರ್ ಸೇನಾ ಭರ್ತಿ: ಮೊದಲ‌ ದಿನ ಕೊಪ್ಪಳ ಜಿಲ್ಲೆಯ 518 ಯುವಕರು ಮುಂದಿನ ಹಂತಕ್ಕೆ ಆಯ್ಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!