ಹೊಸಶಕೆ ನ್ಯೂಸ್-ಬಳ್ಳಾರಿ/ವಿಜಯನಗರ/ಕೊಪ್ಪಳ:ಶಿವಮೊಗ್ಗ ಮತ್ತು ಚಿಕ್ಕಮಗಳೂರು, ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ, ಡ್ಯಾಂಗಳಿಂದ ನದಿಗೆ ನೀರು ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್ಸ್ ನೀರು ಅಪಾಯ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಜನರು ನದಿಪಾತ್ರದಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಜಾನುವಾರುಗಳು ಸೇರಿದಂತೆ ನದಿಗೆ ಇಳಿಯಬಾರದು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು,ಅಪಾಯದ ಮಟ್ಟದಲ್ಲಿ ನದಿ ಹರಿಯುತ್ತಿರುವ ಕಾರಣ ನದಿಪಾತ್ರದಲ್ಲಿನ ಜನರು ಎಚ್ಚರಿಕೆಯಿಂದಿರಬೇಕು , ತುಂಗಾ ಜಲಾಶಯದಿಂದ 68,599 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದ್ದು, ಭದ್ರಾ ಜಲಾಶಯ ಭರ್ತಿಯಾಗುವ ಹಂತದಲ್ಲಿದೆ. ಪರಿಣಾಮ 39017 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿರುತ್ತದೆ. ಪ್ರಸ್ತುತ ತುಂಗಭದ್ರಾ ನದಿಯಲ್ಲಿ ಅಪಾಯ ಮಟ್ಟ ಮೀರಿ 1,12,170 ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಇದರಿಂದಾಗಿ ಹೊನ್ನಾಳಿ, ನ್ಯಾಮತಿ ಹಾಗೂ ಹರಿಹರ ತಾಲ್ಲೂಕುಗಳ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುತ್ತದೆ.
ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ತುಂಗಭದ್ರಾ ಜಲಾಶಯದಿಂದ ನದಿಗೆ ನದಿಗೆ 1,00,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಪರಿಣಾಮ ಪುರಂದರದಾಸ ಮಂಟಪ, ಚಕ್ರತೀರ್ಥ, ರಾಮ ಸೀತಾ ದೇವಸ್ಥಾನ ಸೇರಿದಂತೆ ಅನೇಕ ಹಂಪಿ ಸ್ಮಾರಕಗಳು ಮುಳುಗಡೆಯಾಗಿವೆ.
ತುಂಗಭದ್ರಾ ನದಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ, ಜಲಾಶಯಕ್ಕೆ 90,000 ಕ್ಯೂಸೆಕ್‌ಗಳಿಗೂ ಹೆಚ್ಚು ನೀರಿನ ಒಳಹರಿವು ಬಂದಿದೆ. ಅಣೆಕಟ್ಟಿನ ಕ್ರೆಸ್ಟ್ ಗೇಟ್‌ಗಳನ್ನು ತೆರೆದು ಹೆಚ್ಚುವರಿ ನೀರನ್ನು ನದಿಗೆ ಬಿಡುವ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನು 105 ಟಿಎಂಸಿಯಿಂದ 70 ಟಿಎಂಸಿಗೆ ಇಳಿಸಲು ತಜ್ಞರ ತಂಡ ಸೂಚಿಸಿದ್ದು, ಕಳೆದ 24 ಗಂಟೆಗಳಲ್ಲಿ, ಅಣೆಕಟ್ಟಿನ ಕ್ರೆಸ್ಟ್ ಗೇಟ್‌ಗಳಿಂದ 1,10,000 ಕ್ಯೂಸೆಕ್‌ಗಳಿಗೂ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನದಿಗೆ ನೀರು ಬಿಡುಗಡೆ ಮಾಡಿದ ಪರಿಣಾಮ ಹಂಪಿಯ ಅನೇಕ ಸ್ಮಾರಕಗಳು ಮುಳುಗಡೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಪ್ರಸಿದ್ಧ ಹಂಪಿ ಸ್ಮಾರಕಗಳಾದ ಪುರಂದರದಾಸ ಮಂಟಪ, ಚಕ್ರತೀರ್ಥ ದೇವಸ್ಥಾನ ಮತ್ತು ಇತರ ಕೆಲವು ಸ್ಮಾರಕಗಳ ಪ್ರವೇಶಕ್ಕೆ ವಿಜಯನಗರ ಜಿಲ್ಲಾ ಅಧಿಕಾರಿಗಳು ನಿರ್ಬಂಧ ಹೇರಿದ್ದಾರೆ. ಏತನ್ಮಧ್ಯೆ, ಬಳ್ಳಾರಿ ಜಿಲ್ಲಾಡಳಿತವು ಮುಂದಿನ ಆದೇಶಗಳನ್ನು ನೀಡುವವರೆಗೆ ಕಂಪ್ಲಿ ಮತ್ತು ಗಂಗಾವತಿ ಪಟ್ಟಣವನ್ನು ಸಂಪರ್ಕಿಸುವ ಸೇತುವೆಯನ್ನು ಬಂದ್ ಮಾಡಿದೆ.
ಕಳೆದ 24 ಗಂಟೆಗಳಲ್ಲಿ 90,0000 ರಿಂದ 1,40,000 ಕ್ಯೂಸೆಕ್ ನೀರನ್ನು ತುಂಗಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ, ಅಣೆಕಟ್ಟಿನ ಪ್ರಸ್ತುತ ಸಂಗ್ರಹ 75.709 ಟಿಎಂಸಿ ಮತ್ತು ಒಟ್ಟು ಸಾಮರ್ಥ್ಯ 105.788 ಟಿಎಂಸಿಗೆ ಹತ್ತಿರದಲ್ಲಿದೆ, ಜಲಾನಯನ ಪ್ರದೇಶದಲ್ಲಿನ ಹಂಪಿ ಸ್ಮಾರಕಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇದಲ್ಲದೆ, ಮುಂದಿನ ಆದೇಶದವರೆಗೆ ಈಜು, ಮೀನುಗಾರಿಕೆ ಮತ್ತು ಇತರ ಚಟುವಟಿಕೆಗಳನ್ನು ಸಹ ನಿಷೇಧಿಸಲಾಗಿದೆ. ಪ್ರವಾಸಿಗರು ಮಾರ್ಗಸೂಚಿಗಳನ್ನು ಪಾಲಿಸುವಂತೆ ಅಧಿಕಾರಿಗಳು ವಿನಂತಿಸಿದ್ದಾರೆ.
==ಕಂಪ್ಲಿ ಸೇತುವೆ ಮೇಲಿನ ಸಂಚಾರ ನಿಷೇಧ: ತುಂಗಭದ್ರಾ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಕಂಪ್ಲಿ ಸೇತುವೆ ಮುಳುಗಡೆ ಭೀತಿ, ಬಳ್ಳಾರಿ – ಕೊಪ್ಪಳ ನೇರ ಸಂಪರ್ಕ ಸ್ಥಗಿತ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿ ಇರುವ ಕಂಪ್ಲಿ ಸೇತುವೆ ಮೇಲಿನ ಸಂಚಾರ ನಿಷೇಧ ಮಾಡಿ ಲೋಕೋಪಯೋಗಿ ಇಲಾಖೆ ಆದೇಶ ಹೊರಡಿಸಿದೆ.
ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ಮಧ್ಯೆ ಇದ್ದ ಅಂತರ್ ಜಿಲ್ಲಾ ನೇರ ಸಂಪರ್ಕ ಸ್ಥಗಿತವಾಗಿದೆ. ಹೀಗಾಗಿ ಗಂಗಾವತಿ – ಕಂಪ್ಲಿ ಮಧ್ಯದ ಸಂಚಾರ ಅಥವಾ ಬಳ್ಳಾರಿ-ಕೊಪ್ಪಳ ಜಿಲ್ಲೆಯ ಸಂಚಾರಕ್ಕೆ ಸುತ್ತು ಬಳಸಿ ಬರಬೇಕು. .ಕಂಪ್ಲಿ ಮತ್ತು ಗಂಗಾವತಿ ಆಡಳಿತಾತ್ಮಕವಾಗಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗೆ ಸೇರಿವೆಯಾದರೂ, ಭೌಗೋಳಿಕವಾಗಿ ಎರಡು ತಾಲೂಕಿನ ಗಡಿಗಳು ಕೇವಲ ಒಂದು ಕಿಲೋ ಮೀಟರ್ ಅಂತರದಲ್ಲಿವೆ. ಚಿಕ್ಕಜಂತಕಲ್-ಕಂಪ್ಲಿ ಬಳಿ ಇರುವ ಸುಮಾರು ಒಂದು ಕಿಲೋ ಮೀಟರ್ ಉದ್ದದ ಸೇತುವೆಯೇ ಈ ಎರಡೂ ತಾಲೂಕನ್ನು ವಿಭಜಿಸಿದೆ.
ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸುತ್ತಿರುವ ಹಿನ್ನೆಲೆ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ನದಿಯ ಸನಿಹಕ್ಕೆ ಹೋಗದಂತೆ ನದಿಪಾತ್ರದ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿಗಳಿಂದ ಡಂಗುರ ಸಾರಲಾಗುತ್ತಿದೆ. ಆನೆಗೊಂದಿ, ಸಣಾಪುರ, ಸಂಗಾಪುರ ಪಂಚಾಯಿತಿ ವ್ಯಾಪ್ತಿಯ ಹತ್ತಾರು ಹಳ್ಳಿಗಳಲ್ಲಿ ಡಂಗುರ ಸಾರುವ ಮೂಲಕ ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಅಲರ್ಟ್ ಇರುವಂತೆ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.