Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಕಲೆ-ಸಾಹಿತ್ಯ-ಸಂಸ್ಕೃತಿ

ಅನಿಕೇತ ಬಳ್ಳಾರಿಗೆ ಬಾಲವಿಕಾಸ ಅಕಾಡೆಮಿಯ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿ

ಅನಿಕೇತನಿಗೆ ಕೊಪ್ಪಳ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪುರಸ್ಕಾರ

Hosashake News by Hosashake News
December 13, 2025
in ಕಲೆ-ಸಾಹಿತ್ಯ-ಸಂಸ್ಕೃತಿ, ಜಿಲ್ಲೆ, ದೇಶ, ಪರಿಸರ, ಪ್ರಾದೇಶಿಕ, ರಾಜ್ಯ, ಶಿಕ್ಣಣ-ಆರೋಗ್ಯ
0
ಅನಿಕೇತ ಬಳ್ಳಾರಿಗೆ ಬಾಲವಿಕಾಸ ಅಕಾಡೆಮಿಯ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿ
Share on FacebookShare on Twitter

ಹೊಸಶಕೆ ನ್ಯೂಸ್–ಕೊಪ್ಪಳ:ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಅನಿಕೇತ ರಾಜೇಶ ಬಳ್ಳಾರಿ ಕರ್ನಾಟಕ ಸರಕಾರ ಕೊಡಮಾಡುವ ‘ಬಾಲ ವಿಕಾಸ ಅಕಾಡೆಮಿ’ಯ ‘ಅಕಾಡೆಮಿ ಬಾಲ ಗೌರವ’ ಪ್ರಶಸ್ತಿಗೆ ಆಯ್ಕೆ ಆಗಿದ್ದಾನೆ.

ಉತ್ತಮ ಈಜು ಮತ್ತು ನೃತ್ಯಪಟುವಾಗಿರುವ ಅನಿಕೇತ ಬಳ್ಳಾರಿ ‘ನಮ್ಮ ಭಾಷೆ – ನಮ್ಮ ಕನ್ನಡ’ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಬಾಲನಟನಾಗಿಯೂ ಅಭಿನಯಿಸಿದ್ದು, ಕಳೆದ 2024-25 ನೇ ಸಾಲಿನಲ್ಲಿಯೂ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿಯಲ್ಲಿ ಕೊಡಮಾಡಲಾದ ಹತ್ತು ಸಾವಿರ ರೂಪಾಯಿ ನಗದು ಬಹುಮಾನದ ‘ಕೊಪ್ಪಳ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪುರಸ್ಕಾರ’ವೂ ಅನಿಕೇತನಿಗೆ ಲಭಿಸಿತ್ತು.

ಅನಿಕೇತನಿಗೆ ಸದರಿ ಪ್ರಶಸ್ತಿಯನ್ನು ಇದೇ ಡಿಸೆಂಬರ್ 16, ಮಂಗಳವಾರದAದು ಬೆಳಗಾವಿಯ ಸುವರ್ಣಸೌಧದ ಗಾಂಧಿ ಪ್ರತಿಮೆಯ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷಿö್ಮÃ ಹೆಬ್ಬಾಳಕರ, ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸೇರಿ ಹಲವು ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ತಿಳಿಸಿದ್ದಾರೆ.

Tags: Aniket Ballari receives state-level Balgharava awardAniket Ballari receives state-level Balgharava award from Bal Vikas AcademyAniketani Ballery receives Koppal district level exceptional talent awardHosashake News KoppalKoppal ಅನಿಕೇತ ಬಳ್ಳಾರಿಗೆ ಬಾಲವಿಕಾಸ ಅಕಾಡೆಮಿಯ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿಅನಿಕೇತನಿಗೆ ಕೊಪ್ಪಳ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪುರಸ್ಕಾರ
Previous Post

ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ: ಸಿದ್ದರಾಮಯ್ಯ

Next Post

ಬಹದ್ದೂರಬಂಡಿ ಸರಕಾರಿ ಶಾಲೆಯ 24 ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!