Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಕಲೆ-ಸಾಹಿತ್ಯ-ಸಂಸ್ಕೃತಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಚಲನಚಿತ್ರ ಸಾಹಿತ್ಯ ಪ್ರಶಸ್ತಿ ಪ್ರಕಟ

2020 ಹಾಗೂ 2021 ರ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ- : ಮಂಜುನಾಥ ಡೊಳ್ಳಿನ

Hosashake News by Hosashake News
January 12, 2026
in ಕಲೆ-ಸಾಹಿತ್ಯ-ಸಂಸ್ಕೃತಿ, ಜಿಲ್ಲೆ, ದೇಶ, ಪರಿಸರ, ಪ್ರಾದೇಶಿಕ, ರಾಜ್ಯ, ಸಾಮಾಜಿಕ
0
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಚಲನಚಿತ್ರ ಸಾಹಿತ್ಯ ಪ್ರಶಸ್ತಿ ಪ್ರಕಟ
Share on FacebookShare on Twitter

ಹೊಸಶಕೆ ನ್ಯೂಸ್-ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021 ನೇ ಕ್ಯಾಲೆಂಡರ್ ವರ್ಷಗಳ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ ಎಂದು ವಾರ್ತಾ ಇಲಾಖೆ ಜಂಟಿ ನಿರ್ದೇಶಕ ,ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಮಂಜುನಾಥ ಡೊಳ್ಳಿನ ತಿಳಿಸಿದ್ದಾರೆ.

2020 ನೇ ಕ್ಯಾಲೆಂಡರ್ ವರ್ಷದ ಚಲನಚಿತ್ರ ಸಾಹಿತ್ಯ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆ ಸಿರಿಗೇರಿಯ ಅನ್ನಪೂರ್ಣ ಪ್ರಕಾಶನ ಪ್ರಕಟಿಸಿದ  , ಹಿರಿಯ ಪತ್ರಕರ್ತ ರಘುನಾಥ ಚ.ಹ.ಅವರು ಆಯ್ದ 20 ಸಿನೆಮಾಗಳ ಕುರಿತು  ಬರೆದ ಲೇಖನಗಳ ಸಂಗ್ರಹ “ನಮೋ ವೆಂಕಟೇಶ” ಕೃತಿ ಆಯ್ಕೆಯಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿದ್ದ  ಹಿರಿಯ ಪತ್ರರ್ತರಾದ ಡಾ.ರಾಜಶೇಖರ ಹತಗುಂದಿ ಹಾಗೂ ಬಸವರಾಜು ಮೇಗಲಕೇರಿ ಅವರು 2020 ನೇ ಕ್ಯಾಲೆಂಡರ್ ವರ್ಷದ ಕೃತಿಯನ್ನು ಆಯ್ಕೆ ಮಾಡಿದ್ದರು.

2021 ನೇ ಕ್ಯಾಲೆಂಡರ್ ವರ್ಷದ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಗೆ ಬೆಂಗಳೂರಿನ ಸಿರಿಗಂಧ ಪ್ರಕಾಶನ ಪ್ರಕಟಿಸಿರುವ ,ಲೇಖಕ ಹಾಗೂ ಚಲನಚಿತ್ರ ನಿರ್ದೇಶಕ  ಪ್ರಕಾಶರಾಜ್ ಮೇಹು ಅವರು ಬರೆದ ಡಾ.ರಾಜಕುಮಾರ್ ಬದುಕಿನ ಕುರಿತ “ಅಂತರಂಗದ ಅಣ್ಣ” ಕೃತಿ ಆಯ್ಕೆಯಾಗಿದೆ. ಸಾಹಿತಿ ಡಾ.ಚಿದಾನಂದ ಸಾಲಿ ಹಾಗೂ ಪತ್ರಕರ್ತ ಡಾ.ಶರಣು ಹುಲ್ಲೂರು ಅವರು ಪ್ರಶಸ್ತಿ  ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.

ಪ್ರಶಸ್ತಿಯು ಲೇಖಕರು ಹಾಗೂ ಪ್ರಕಾಶಕರಿಬ್ಬರಿಗೂ ತಲಾ 20 ಸಾವಿರ ರೂ.ನಗದು ಹಾಗೂ 50 ಗ್ರಾಂ ಬೆಳ್ಳಿ ಪದಕಗಳನ್ನು ಒಳಗೊಂಡಿದೆ ಎಂದು ಎಂದು ವಾರ್ತಾ ಇಲಾಖೆ ಜಂಟಿ ನಿರ್ದೇಶಕ ,ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಮಂಜುನಾಥ ಡೊಳ್ಳಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: 2020 and 2021 Film Literature Annual Award- : Manjunatha DollinaFilm Literature Award announcedInformation and Public Relations Departmentರಿಯ ಪತ್ರಕರ್ತ ರಘುನಾಥ ಚ.ಹ.ಲೇಖಕ ಹಾಗೂ ಚಲನಚಿತ್ರ ನಿರ್ದೇಶಕ  ಪ್ರಕಾಶರಾಜ್ ಮೇಹುವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
Previous Post

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಪ್ರಸನ್ನ ಗಡಾದ ನೇಮಕ

Next Post

ಹೊಸಶಕೆ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!