ಕನ್ನಡಮ್ಮ ಸುದ್ದಿ-ಯಲಬುರ್ಗಾ:ಹಾಲಿನಂತಿರುವ ಹಾಲುಮತ ಸಮಾಜ ಅತ್ಯಂತ ಪ್ರಾಮಾಣಿಕ, ವಿಶ್ವಾಸವುಳ್ಳ ಜನಾಂಗವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಜಿಪಂ ಮಾಜಿ ಸದಸ್ಯ ಅರವಿಂದಗೌಡ ಪಾಟೀಲ ಹೇಳಿದರು.
ಪಟ್ಟಣದಲ್ಲಿ ಶಿವರಾತ್ರಿ ನಿಮಿತ್ತ ಪ್ರತಿ ವರ್ಷದಂತೆ ಬುಧವಾರ ಶ್ರೀಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ನಾಡಿಗೆ ಹಾಲುಮತ ಸಮಾಜದವರ ನೀಡಿದ ಕೊಡುಗೆ ಅಪಾರವಾಗಿದೆ ಎಂದರು.
ವೀರ ಸಂಗೊಳ್ಳಿ ರಾಯಣ್ಣನ ದೇಶಾಭಿಮಾನವನ್ನು ಸ್ಮರಿಸುವ ಮೂಲಕ ಆತನ ಧೈರ್ಯ, ಸಾಹಸ ಮರೆಯಲೂ ಸಾಧ್ಯವಿಲ್ಲ. ಅಂತಹವರ ತತ್ವಾದರ್ಶಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ ಅವರು, ಹಾಲುಮತ ಸಮಾಜ ಬಾಂಧವರು ಮಕ್ಕಳಿಗೆ ಶಿಕ್ಷಣ ಕೊಡಿಸಿ ಇನ್ನಷ್ಟು ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿಗೊಳ್ಳಲು ಸಾಧ್ಯವಾಗುತ್ತದೆ ಎಂದು ಜಿ.ಪಂ. ಮಾಜಿ ಸದಸ್ಯ ಅರವಿಂದಗೌಡ ಪಾಟೀಲ ಹೇಳಿದರು.
ಜಿಪಂ ಮಾಜಿ ಸದಸ್ಯ ಸಿ.ಎಚ್. ಪಾಟೀಲ ಮಾತನಾಡಿ, ಹಾಲುಮತ ಸಮಾಜ ಬಾಂಧವರು ನಿರ್ಸಗದ ಜೊತೆಗೆ ಭೂಮಿ ತಾಯಿಯ ಆರಾಧಕರು ಆಗಿದ್ದಾರೆ. ವಿಶ್ವಾಸ, ಪ್ರಾಮಾಣಿಕತೆ, ನಂಬಿಕೆಯೇ ವಿಶ್ವಾಸದ ಸಂಕೇತ ಹಾಲುಮತ ಸಮಾಜವಾಗಿದೆ ಎಂದರು.
ಹಾಲುಮತ ಸಮಾಜದ ಅಧ್ಯಕ್ಷ ವೀರನಗೌಡ ಪೊಲೀಸ್‌ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖಂಡ ರೇವಣಪ್ಪ ಹಿರೇಕುರಬರ ಪ್ರಾಸ್ತಾವಿಕ ಮಾತನಾಡಿದರು. ದ್ಯಾಮಯ್ಯ ಗುರುವಿನ, ವಿರೂಪಾಕ್ಷಯ್ಯ ಗುರುವಿನ ಸಾನ್ನಿಧ್ಯ ವಹಿಸಿದ್ದರು. ಸಿಡಿಪಿಒ ಬೆಟದಪ್ಪ ಮಳೆಕೊಪ್ಪ, ಗಣ್ಯರಾದ ಶೇಖರಗೌಡ ಉಳ್ಳಾಗಡ್ಡಿ, ಅಮರಪ್ಪ ಕಲಬುರ್ಗಿ, ಶಾರದಾ ಸಾಲಭಾವಿ, ಪ್ರೇಮಾ ನೋಟಗಾರ,ಶಿವು ರಾಜೂರು.ನಿಂಗಪ್ಪ ಹಿರೇಕುರಬರ, ಆನಂದ ಉಳ್ಳಾಗಡ್ಡಿ ಮತ್ತಿತರರು ಇದ್ದರು.