ಹೊಸಶಕೆ ನ್ಯೂಸ್-ಕೊಪ್ಪಳ: ಇಂದಿನ ದಿನಗಳಲ್ಲಿ ವಿಜ್ಞಾನ ಸಾಕಷ್ಟು ಪ್ರಗತಿ ಸಾಧಿಸಿದ್ದು, ಪ್ರತಿಯೊಬ್ಬರು ವೈಜ್ಞಾನಿಕವಾಗಿ ಚಿಂತಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಎಚ್.ನಾಯಕ್ ಕರೆ ನೀಡಿದರು.
ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯಬ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,ವಿಜ್ಞಾನಿ ಸರ್ ಸಿ ವಿ ರಾಮನ್ ಇವರು ರಾಮನ್ ಎಫೆಕ್ಟ್ ಎಂಬ ಪ್ರಬಂಧವನ್ನು ಮಂಡಿಸಿದ ಈ ಸವಿ ನೆನಪಿಗಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ವಿವರಿಸಿದರು. ಸಮಾರಂಭದಲ್ಲಿ ಕಾಲೇಜಿನ ವಿದ್ಯಾರ್ಥಿ ಹಾಗೂ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ರಸಾಯನ ಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ವೈ.ಬಿ. ಅಂಗಡಿ, ಭೌತಶಾಸ್ತ್ರವಿಭಾಗದ ಸಹಾಯಕ ಪ್ರಾಧ್ಯಾಪಕ ಸಿದ್ದಲಿಂಗೇಶ್ , ದೈಹಿಕ ನಿರ್ದೇಶಕಮಂಜುನಾಥ್ ಆರೆಂಟನೂರ್, ಕನ್ನಡ ವಿಭಾಗದ ಡಾ. ಭಾಗ್ಯಜ್ಯೋತಿ , ಅರ್ಥಶಾಸ್ತ್ರ ವಿಭಾಗದ ಸಂತೋಷ ಕುಮಾರಿ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಸಂಯೋಜಕರಾದ ಡಾ.ಟಿ.ವಿ.ವಾರುಣಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಇದ್ದರು.