Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಮಾ. 12 ರಂದು ಯಲಬುರ್ಗಾದಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

Hosashake News by Hosashake News
March 7, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜ್ಯ, ಸುದ್ದಿ
0
ಮಾ. 12 ರಂದು ಯಲಬುರ್ಗಾದಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ : ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳಿಂದ ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕಿನಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರಿಸಲು ಮಾರ್ಚ್ 12 ರಂದು ಬೆಳಿಗ್ಗೆ 11 ಗಂಟೆಗೆ ಯಲಬುರ್ಗಾ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕರಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ, ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಲಂಚ ಕೇಳುವುದು ಇತ್ಯಾದಿ ದುರಾಡಳಿತದಲ್ಲಿ ತೊಡಗಿದ್ದರೆ, ಈ ಕುರಿತು ದೂರು ಸ್ವೀಕರಿಸಲು ಲೋಕಾಯುಕ್ತರಿಂದ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳ ಸಭೆ ನೆಡೆಸಲು ತೀರ್ಮಾನ ಮಾಡಲಾಗಿದೆ.

ಈ ಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಎಲ್ಲಾ ಇಲಾಖೆಯ ತಾಲ್ಲೂಕ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 & 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಕನಕಗಿರಿ ತಾಲ್ಲೂಕಿನ ಸಾರ್ವಜನಿಕರು ಈ ಸಭೆಯ ಸದುಪಯೋಗ ಪಡೆದುಕೊಳ್ಳಲು ಈ ಮೂಲಕ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9364062699, 9364062700, 9364062701, 9364062702 ಹಾಗೂ 9364062703 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಕೊಪ್ಪಳ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ದೇವದಾಸಿ ಪದ್ಧತಿ ನಿರ್ಮೂಲನೆಗೆ ಶಿಕ್ಷಣ ಅಗತ್ಯ: ನ್ಯಾ. ಮಾಹಂತೇಶ ದರಗದ್

Next Post

4 ಲಕ್ಷ ಕೋಟಿ ರೂ.ಗಳ ಮೀರಿದ ಆಯವ್ಯಯ ಹೊಸ ಮೈಲಿಗಲ್ಲು: ಮುಖ್ಯಮಂತ್ರಿ ಸಿದ್ದರಾಮಯ್ಯ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಮೊರೆರ ಬೆಟ್ಟಗಳನ್ನು ವಿಶ್ವ ಪಾರಂಪರಿಕ ತಾಣಗಳನ್ನಾಗಿ ಮಾಡಲಾಗುವುದು- ಸಚಿವ ಎಚ್.ಕೆ. ಪಾಟೀಲ್

ಕೊಪ್ಪಳ ಜಿ.ಪಂ. ನೂತನ ಸಿಇಓ ಆಗಿ ವರ್ಣಿತ್ ನೇಗಿ ಅಧಿಕಾರ ಸ್ವೀಕಾರ

ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

ಡಾ. ಫ.ಗು.ಹಳಕಟ್ಟಿ,  ಹಡಪದ ಅಪ್ಪಣ್ಣ ಜಯಂತಿಗೆ ಅಗತ್ಯ ಸಿದ್ಧತೆ – ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

ಜಿ. ಪಂ ನೂತನ ಸಿಇಓ ಆಗಿ ವರ್ಣಿತ್ ನೇಗಿ ಅಧಿಕಾರ ಸ್ವೀಕಾರ

ಕೊಪ್ಪಳ ಜಿಲ್ಲಾಧಿಕಾರಿಗಳಾಗಿ ಡಾ. ಸುರೇಶ್ ಬಿ ಇಟ್ನಾಳ ಅಧಿಕಾರ ಸ್ವೀಕಾರ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!