ಹೊಸಶಕೆ ನ್ಯೂಸ್- -ಕೊಪ್ಪಳ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ದಾಖಲೆಯ 16ನೇ ಆಯವ್ಯಯ ಸರ್ವರಿಗೂ ಸಮಪಾಲಿನ ಬಜೆಟ್ ಆಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಐತಿಹಾಸಿಕವಾಗಿದ್ದು, ಆರ್ಥಿಕ ಶಿಸ್ತಿನಿಂದ ಕೂಡಿದೆ. ಸರ್ವರಿಗೂ ಸಮತೋಲಿತವಾದ ಬಜೆಟ್ ಆಗಿದ್ದು, ಜನಕೇಂದ್ರಿತ ಕಲ್ಯಾಣ ಕಾರ್ಯಕ್ರಮಗಳ ಬಜೆಟ್ ಇದಾಗಿದೆ ಎಂದಿದ್ದಾರೆ. ಇನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಐಎಎಸ್, ಐಪಿಎಸ್, ಕೆಎಎಸ್ ಮತ್ತು ಕೆಎಸ್ ಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರು ನಗರದಲ್ಲಿ ಎರಡು ಸುಸಜ್ಜಿತ ವಸತಿ ನಿಲಯಗಳನ್ನು ಪ್ರಾರಂಭಿಸುವುದಾಗಿ ಮುಖ್ಯಮಂತ್ರಿಗಳಿಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಕೈಗಾರಿಕಾ ನಿವೇಶನ/ಜಮೀನುಗಳನ್ನು ಮಂಜೂರು ಮಾಡುವಾಗ ಪ್ರತಿ ಕೈಗಾರಿಕಾ ಪ್ರದೇಶದ ಹಂಚಿಕೆಯಲ್ಲಿ, ಹಿಂದುಳಿದ ವರ್ಗಗಳ ಪ್ರವರ್ಗ -1, ಪ್ರವರ್ಗ -2 ಎ ಮತ್ತು 2ಬಿ ಸಮುದಾತಗಳಿಗೆ ಶೇ.20 ರಷ್ಟು ಭೂಮಿ ಖರೀದಿಗೆ ಅವಕಾಶ, 7.ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದವರು ಕಾಲೋನಿಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ.ಅನುದಾನವನ್ನು ಒದಗಿಸುವುದು ಒಗಿಸುವುದು ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಅನ್ನದಾತರಿಗಾಗಿ ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ, ತೊಗರಿ ಉತ್ಪಾದನೆ ಉತ್ತೇಜನಕ್ಕೆ ನೆರವು, ಹೈನುಗಾರಿಕೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಮೂಲಸೌಲಭ್ಯ, ಕೈಗಾರಿಕೆ, ಶಿಕ್ಷಣ, ಮಹಿಳಾ ಸಬಲೀಕರಣ ಸೇರಿದಂತೆ ಎಲ್ಲಾ ಇಲಾಖೆಗಳಿಗೆ ಆದ್ಯತೆ ನೀಡಲಾಗಿದೆ.
ಒಟ್ಟಾರೆ ಎಲ್ಲ ವಯಲಗಳಿಗೂ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ಬಜೆಟ್ ತಯಾರಿ ವೇಳೆ ರೈತರು ಸೇರಿದಂತೆ ಎಲ್ಲ ವರ್ಗದವರಿಂದ ಮುಖ್ಯಮಂತ್ರಿಗಳು ಅಭಿಪ್ರಾಯ ಸಂಗ್ರಹಿಸಿ ಬಜೆಟ್ ಮಂಡಿಸಿದ್ದಾರೆ. ಇದೊಂದು ಜನಪರವಾದ ಬಜೆಟ್ ಆಗಿದೆ. ವಿಪಕ್ಷಗಳು ಪಂಚ ಗ್ಯಾರಂಟಿಗಳ ಬಗ್ಗೆ ಇಲ್ಲ-ಸಲ್ಲದ ಹೇಳಿಕೆ ನೀಡುತ್ತಿದ್ದವು. ಮುಖ್ಯಮಂತ್ರಿಗಳು ಗ್ಯಾರಂಟಿಗಳ ಅನುದಾನದ ಜತೆಗೆ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ಒದಗಿಸಿದ್ದಾರೆ. ಬಜೆಟ್ ನಲ್ಲಿ ಆರ್ಥಿಕ ಶಿಸ್ತನ್ನು ಕಾಪಾಡಿದ್ದು, ಇದೊಂದು ಸಾಮಾಜಿಕ ನ್ಯಾಯವನ್ನು ಒದಗಿಸುವ ಬಜೆಟ್ ಎಂದು ತಿಳಿಸಿದ್ದಾರೆ.