ಹೊಸಶಕೆ ನ್ಯೂಸ್ -ಕೊಪ್ಪಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾ.9, ರವಿವಾರ ರಾಜ್ಯಮಟ್ಟದ ಕೆ ಯು ಡಬ್ಲ್ಯೂ ಜೆ ದತ್ತಿ ನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ ಜರುಗಲಿದೆ,
ನಗರದ ಪಾನಗಂಟಿ ಮತ್ತು ಕಠಾರೆ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಉದ್ಘಾಟಿಸಲಿದ್ದು, ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ , ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ ರವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ, ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೇಗಾರ ,ಕೆ ವಿ ಪ್ರಭಾಕರ್ ಅವರು ಅಭಿನಂದನಾ ನುಡಿ ಮಾಡಲಿದ್ದಾರೆ ,
ಮಾಧ್ಯಮ ತಜ್ಞ ಬಿ.ಕೆ ಮೋಹನ್ ಪುಸ್ತಕ ಕುರಿತು ಮಾತನಾಡಲಿದ್ದಾರೆ, ಮುಖ್ಯ ಅತಿಥಿಗಳಾಗಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ ಕೆ ರವಿ. ಶಾಸಕ ಕೆ ರಾಘವೇಂದ್ರ ಹಿಟ್ನಾಳ , ಸಂಸದ ಕೆ ರಾಜಶೇಖರ್ ಹಿಟ್ನಾಳ, ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್ ಗುಪ್ತ , ಜಿಲ್ಲಾಧಿಕಾರಿ ನಳಿನ್ ಅತುಲ್ ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್, ಎಲ್ ಅರಸಿದ್ದಿ ,
ಸಂಘದ ರಾಜ್ಯ ಪದಾಧಿಕಾರಿಗಳಾದ ಜಿಸಿ ಲೋಕೇಶ್, ಭವಾನಿಸಿಂಗ್ ಠಾಕೂರ್ , ಅಜ್ಜಮಾಡು ರಮೇಶ್ ಕೊಟ್ಟಪ್ಪ , ಪುಂಡಲಿಕ್ ಬಾಳೋಜಿ, ಮತ್ತಿಕೆರೆ ಜಯರಾಮ್, ಸೋಮಶೇಖರ ಕೆರಗೋಡು, ನಿಂಗಪ್ಪ ಚೌಡಿ , ವಾಸುದೇವ ಹೊಳ್ಳ ಸೇರಿದಂತೆ ಜಿಲ್ಲಾ ಅಧ್ಯಕ್ಷ ಹನುಮಂತ ಹಳ್ಳಿಕೇರಿ, ಪ್ರಶಸ್ತಿ ಪುರಸ್ಕೃತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ,
ಬೆಳಿಗ್ಗೆ ಪಾನಗoಟ್ಟಿ ಕಲ್ಯಾಣ ಮಂಟಪದಲ್ಲಿ ಸಂಘದ ರಾಜ್ಯ ಕಾರ್ಯಕಾರಣಿ ಸಭೆ ಮತ್ತು 91ನೇ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಮಹಾಸಭೆ ಕೂಡ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ ರವರ ಅಧ್ಯಕ್ಷತೆಯಲ್ಲಿ ಜರುಗಲಿದೆ