ಹೊಸಶಕೆ ನ್ಯೂಸ್-ಕೊಪ್ಪಳ :
ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ನಾಗರಿಕರಿಗಾಗಿ ಈ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿಗೆ ಸ್ಪಂದಿಸಲು ನಗರಸಭೆಯಿಂದ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಪೌರಾಯುಕ್ತರಾದ ಗಣಪತಿ ಪಾಟೀಲ ಅವರು ತಿಳಿಸಿದ್ದಾರೆ.
ಬೇಸಿಗೆ ನಿಮಿತ್ಯ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ಸಮಸ್ಯೆಗಳಿಗೆ ಸಾರ್ವಜನಿಕರು ಕೊಪ್ಪಳ ನಗರಸಭೆ ಕಾರ್ಯಾಲಯದ ಸಹಾಯವಾಣಿ ಸಂಖ್ಯೆ: 08539-230192 ಮತ್ತು 9880662053, 9986136806 ಗೆ ಕರೆ ಮಾಡಿ ದೂರನ್ನು ನಮೂದಿಸಿದಲ್ಲಿ ಸಮಸ್ಯೆಯನ್ನು ಪರಿಹರಿಸಲಾಗುವುದೆಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.