ಹೊಸಶಕೆ ನ್ಯೂಸ್-ಗಂಗಾವತಿ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಗುಂಜಳ್ಳಿ ಹೀರೆ ನಾಗಪ್ಪ ವಾಣಿಜ್ಯ ಮಹಾವಿದ್ಯಾಲಯ, ಶ್ರೀ ಕೊಟ್ಟೂರೇಶ್ವರ ಕ್ಯಾಂಪಸ್ ಆವರಣ ಪಂಪ ನಗರ ಗಂಗಾವತಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏಪ್ರಿಲ್ 17 ರಂದು ಬೆಳಿಗ್ಗೆ 10 ಗಂಟೆಯಿಂದ 4ರ ವರೆಗೆ ಗಂಗಾವತಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಬೃಹತ್ ಉದ್ಯೋಗ ಮೇಳದಲ್ಲಿ ಕೊಪ್ಪಳ, ಹುಬ್ಬಳ್ಳಿ, ಬೆಂಗಳೂರು, ಬೆಳಗಾವಿ, ಬಳ್ಳಾರಿ, ಹಾಸನ, ಶಿವಮೊಗ್ಗ ಇತರೆ ಭಾಗಗಳ ಪ್ರತಿಷ್ಟಿತ ಕಂಪನಿಗಳು ಭಾಗವಹಿಸುತ್ತವೆ. ಈ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ ಕೊಪ್ಪಳ, ಮೊ. ನಂ: 9353515518 ಇವರನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.