Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಏ. 16 ರಂದು ಕಲಬುರ್ಗಿಯಲ್ಲಿ ಪ್ರಾದೇಶಿಕ ಮಟ್ಟದ ಬೃಹತ್ ಉದ್ಯೋಗ ಮೇಳ 

Hosashake News by Hosashake News
April 13, 2025
in ಜಿಲ್ಲೆ, ದೇಶ, ಪ್ರಾದೇಶಿಕ, ಸುದ್ದಿ
0
ಏ. 16 ರಂದು ಕಲಬುರ್ಗಿಯಲ್ಲಿ ಪ್ರಾದೇಶಿಕ ಮಟ್ಟದ ಬೃಹತ್ ಉದ್ಯೋಗ ಮೇಳ 
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ : ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ‘‘ಪ್ರಾದೇಶಿಕ ಮಟ್ಟದ ಬೃಹತ್ ಉದ್ಯೋಗ ಮೇಳ-2025’’ವನ್ನು ಏಪ್ರಿಲ್ 16 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಕಲಬುರಗಿಯ ರೋಜಾ ಬಿ, ರಿಂಗ್ ರಸ್ತೆಯ ಝಮರ್-ಉಲ್-ಇಸ್ಲಾಮ್ ಕಾಲೋನಿ ‘ಕೆ.ಸಿ.ಟಿ ಕ್ಯಾಂಪಸ್’ನಲ್ಲಿ ಆಯೋಜಿಸಲಾಗಿದ್ದು,  ಆಸಕ್ತರು ಭಾಗವಹಿಸಬುದೆಂದು  ಜಿಲ್ಲಾ ಕೌಶಲ್ಯ ಮಿಷನ್ ಜಿಲ್ಲಾ ಕೌಶ್ಯಲ್ಯಾಭಿವೃದ್ಧಿ ಅಧಿಕಾರಿ ಕೆ. ಗವಿಶಂಕರ್ ಅವರು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಜ್ಯದ ಯುವ ಜನತೆಗಾಗಿ ಕೌಶಲ್ಯದೊಂದಿಗೆ ಉದ್ಯೋಗವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಪ್ರಾದೇಶಿಕ ಮಟ್ಟದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರು ಸೂಚಿಸಿರುವ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ‘‘ಪ್ರಾದೇಶಿಕ ಮಟ್ಟದ ಬೃಹತ್ ಉದ್ಯೋಗ ಮೇಳ-2025’’ವನ್ನು ಏರ್ಪಡಿಸಲಾಗಿದೆ.

ಕಲ್ಯಾಣ ಕರ್ನಾಟಕ ಅಧೀನದಲ್ಲಿ ಬರವ 7 ಜಿಲ್ಲೆಗಳು ಹಾಗೂ ಇತರೆ ಜಿಲ್ಲೆಗಳಿಂದಲೂ ಅಂದಾಜು 20,000 ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು, 200 ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸುವ ನಿರೀಕ್ಷೆ ಇದೆ.
ಕೊಪ್ಪಳ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಪಡೆಯಲು ಇದೊಂದು ಸುವರ್ಣ ಅವಕಾಶವಾಗಿದ್ದು, ಕೊಪ್ಪಳ ಜಿಲ್ಲೆಯ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು, ಉದ್ಯೋಗಾಕಾಂಕ್ಷಿಗಳು ಲಿಂಕ್  https://udyogamela.skillconnect.kaushalkar.com/ext/form/53/1/apply ಮೂಲಕನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

Tags: A regional-level mega job fair will be held in Kalaburagi on April 16.HOsashake nEws A regional-level mega job fairKarnataka Kalaburgi A regional-level mega job fairಏ. 16 ರಂದು ಕಲಬುರ್ಗಿಯಲ್ಲಿ ಪ್ರಾದೇಶಿಕ ಮಟ್ಟದ ಬೃಹತ್ ಉದ್ಯೋಗ ಮೇಳ
Previous Post

ಏ.14 ರಂದು ಕೊಪ್ಪಳದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆ

Next Post

ಏ. 17 ರಂದು ಗಂಗಾವತಿಯಲ್ಲಿ ಬೃಹತ್ ಉದ್ಯೋಗ ಮೇಳ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!