Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಅನ್ನಭಾಗ್ಯ ಯೋಜನೆ: ಕೊಪ್ಪಳ ಜಿಲ್ಲೆಯಲ್ಲಿ ಮಾರ್ಚ್ ತಿಂಗಳ ಪಡಿತರ ಹಂಚಿಕೆ

Hosashake News by Hosashake News
March 8, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜ್ಯ, ಸುದ್ದಿ
0
ಅನ್ನಭಾಗ್ಯ ಯೋಜನೆಯಡಿ ಮಾರ್ಚ್ ಮಾಹೆಯ ಪಡಿತರ ಹಂಚಿಕೆ
Share on FacebookShare on Twitter

ಹೊಸಶಕೆ ನ್ಯೂಸ್ -ಕೊಪ್ಪಳ: ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಕಾರ್ಡುದಾರರಿಗೆ ಮಾರ್ಚ್-2025ರ ಮಾಹೆಯ ಪಡಿತರ ಹಂಚಿಕೆ ಮಾಡಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಹಣವನ್ನು ವರ್ಗಾಹಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರುವರಿ-2025ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯನ್ನು ಸಾರ್ವಜನಿಕರ ವಿತರಣಾ ಪದ್ಧತಿಯಲ್ಲಿ ವಿತರಿಸಲು ಸರ್ಕಾರವು ಆದೇಶಿಸಿರುತ್ತದೆ.

ಅದರಂತೆ ಜಿಲ್ಲೆಯಲ್ಲಿನ ಪಡಿತರ ಚೀಟಿಯಲ್ಲಿನ ಫಲಾನುಭವಿಗಳಿಗೆ ಮಾರ್ಚ್-2025ರ ಮಾಹೆಗೆ ಫೆಬ್ರುವರಿ-2025ರ 5 ಕೆ.ಜಿ ಅಕ್ಕಿ ಸೇರಿಸಿ, ಹಂಚಿಕೆ ಮಾಡಲಾದ ಪಡಿತರ ಪ್ರಮಾಣವು ಅದ್ಯತಾ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 15 ಕೆ.ಜಿ ಅಕ್ಕಿ, ಮೂರು ಸದಸ್ಯರಿಗಿಂತ ಕಡಿಮೆ ಸದಸ್ಯರನ್ನು ಹೊಂದಿರುವ ಅಂತ್ಯೋದಯ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ, ನಾಲ್ಕು ಸದಸ್ಯರಿಗಿಂತ ಹೆಚ್ಚು ಸದಸ್ಯರನ್ನು ಹೊಂದಿರುವ ಅಂತ್ಯೋದಯ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿಯೊಂದಿಗೆ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು .

Tags: Annabhagyya YojaneHosashakae NewsKoppalPress Karnatakaಅನ್ನಭಾಗ್ಯ ಯೋಜನೆಅನ್ನಭಾಗ್ಯ ಯೋಜನೆ: ಕೊಪ್ಪಳ ಜಿಲ್ಲೆಯಲ್ಲಿ ಮಾರ್ಚ್ ತಿಂಗಳ ಪಡಿತರ ಹಂಚಿಕೆಕೊಪ್ಪಳ ಜಿಲ್ಲೆ
Previous Post

ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಕೆ.ವಿ.ಪ್ರಭಾಕರ್ ಆಗಮನ

Next Post

ಚಲನಚಿತ್ರ ಮಸೂದೆ ಅಗತ್ಯ -ಸಚಿವ ಸಂತೋಷ ಲಾಡ್

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!