Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕೊಪ್ಪಳ ಸಮೀಪ ಬಂಕಾಪುರ ಧಾಮದಲ್ಲಿ 5 ಮರಿಗಳಿಗೆ ಜನ್ಮ ನೀಡಿದ ಮತ್ತೊಂದು ತೋಳ

ಕಳೆದ ತಿಂಗಳು ಇದೇ ಕುರುಚಲು ಕಾಡಿನಲ್ಲಿ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿತ್ತು

Hosashake News by Hosashake News
February 14, 2025
in ಜಿಲ್ಲೆ, ದೇಶ, ಪರಿಸರ, ಸುದ್ದಿ
0
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ:   ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಮತ್ತೊಂದು ತೋಳ ಐದು ಮರಿಗಳಿಗೆ ಜನ್ಮ ನೀಡಿದ್ದು, ಸಂರಕ್ಷಿತ ತೋಳ ಧಾಮದಲ್ಲಿ ಅಳಿವಿನಂಚಿನಲ್ಲಿರುವ ಬೂದು ತೋಳ (ಇಂಡಿಯನ್ ಗ್ರೇ ಉಲ್ಫ್)ದ ಸಂತತಿಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಮಾಧ್ಯಮ ಹೇಳಿಕೆಯಲ್ಲಿ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿರುವ ಸುಮಾರು 332 ಹೆಕ್ಟರ್ ಬಂಕಾಪೂರ ತೋಳ ಧಾಮದ ಸಂರಕ್ಷಣೆಗೆ ಅರಣ್ಯ ಇಲಾಖೆ ಕಾಳಜಿ ವಹಿಸಿದ್ದು, ಇದು ವನ್ಯಜೀವಿಗಳಿಗೆ ಸುರಕ್ಷಿತ ತಾಣವಾಗಿದೆ. ತೋಳಗಳ ಸಂತತಿಯಲ್ಲಿ ಹೆಚ್ಚಳಕ್ಕೂ ಇದೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ತಿಂಗಳು ಇದೇ ಕುರುಚಲು ಕಾಡಿನಲ್ಲಿ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿತ್ತು, ಈಗ ಮತ್ತೊಂದು ತೋಳ ಐದು ಮರಿಗೆ ಜನ್ಮಕೊಟ್ಟಿದೆ. ನೈಸರ್ಗಿಕ ಗುಹೆಗಳು, ಬೆಟ್ಟ ಗುಡ್ಡಗಳನ್ನೂ ಹೊಂದಿರುವ ಈ ಧಾಮದಲ್ಲಿ, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿಯೇ ಮೊದಲಾದ ಹಲವು ವನ್ಯಜೀವಿಗಳಿವೆ. ಕಳ್ಳಬೇಟೆ ತಡೆಗೂ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರಸ್ತುತ ಈ ಕಾಡಿನಲ್ಲಿ ಬೂದು ತೋಳಗಳ ಸಂಖ್ಯೆ 40-45ಕ್ಕೆ ಹೆಚ್ಚಳವಾಗಿದೆ. ನವಜಾತ ತೋಳದ ಮರಿಗಳಿಗೆ ಜನರಿಂದಲಾಗಲೀ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಗುಹೆಗಳ ಬಳಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

Previous Post

ವಕ್ಫ್‌ (ತಿದ್ದುಪಡಿ) ಮಸೂದೆಯ ಜಂಟಿ ಸಮಿತಿಯ ವರದಿ ಮಂಡನೆ

Next Post

ಬದುಕಿನ ಸುಂದರ ಸುಳ್ಳು ಎಂದರೆ ನಾ ನಿನ್ನ ತುಂಬಾ ❤️ ಪ್ರೀತಿಸ್ತೀನಿ ಅನ್ನೋದು,,,,

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!