Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಅವಲೋಕನ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ- ಕೊನೆಗೂ ಎಸ್‍ಐಟಿ ರಚಿಸಿದ ಸರ್ಕಾರ

Hosashake News by Hosashake News
July 20, 2025
in ಅವಲೋಕನ, ಪ್ರಾದೇಶಿಕ, ರಾಜಕೀಯ, ರಾಜ್ಯ, ಸಾಮಾಜಿಕ
0
ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ- ಕೊನೆಗೂ ಎಸ್‍ಐಟಿ ರಚಿಸಿದ ಸರ್ಕಾರ
Share on FacebookShare on Twitter

ಹಿರಿಯ ಐಪಿಎಸ್‌ ಅಧಿಕಾರಿ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್‍ಐಟಿ ರಚನೆ ಮಾಡಿ  ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು , ಹಿರಿಯ ಐಪಿಎಸ್‌ ಅಧಿಕಾರಿ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್‍ಐಟಿ ರಚನೆ ಮಾಡಿ  ಸರ್ಕಾರ ಆದೇಶಿಸಿದೆ. ಹಿರಿಯ ಐಪಿಎಸ್‌ ಅಧಿಕಾರಿ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್‍ಐಟಿ ಯಲ್ಲಿ ಐಪಿಎಸ್ ಅಧಿಕಾರಿಗಳಾದ ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮಾ ತನಿಖಾ ತಂಡದಲ್ಲಿದ್ದಾರೆ. ಡಿಜಿಐಜಿಪಿಗೆ ತನಿಖಾ ಹಂತದ ಮಾಹಿತಿ ಆಗಿಂದಾಗ ಕೊಡಬೇಕು. ತನಿಖೆಯ ಅಂತಿಮ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ಎಸ್‍ಐಟಿ ತಂಡಕ್ಕೆ ಸರ್ಕಾರಕ್ಕೆ ಸೂಚಿಸಿದೆ.

ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ.

ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ.

ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ: ಸಿದ್ದರಾಮಯ್ಯ , ಸಿಎಂ

Tags: Dharmasthala burial case - Government finally forms SITThe state government has issued an order to form an SIT under the leadership of senior IPS officer Pranab Mohanty.ಹಿರಿಯ ಐಪಿಎಸ್ ಅಧಿಕಾರಿ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
Previous Post

ಕೃಷ್ಣಾ ನದಿ ನೀರು ಹಂಚಿಕೆ ವಿವಾದ – ಅಂತಿಮ ವರದಿ ಸಲ್ಲಿಕೆಗೆ ಜು.31ರವರೆಗೆ ಅವಧಿ ವಿಸ್ತರಣೆ

Next Post

ಕೊಪ್ಪಳ ಜಿಲ್ಲಾ ಯಾದವ್ ಸಮಾಜದ ನೂತನ ಅಧ್ಯಕ್ಷರಾಗಿ ಕುರಗೋಡ ರವಿ ಯಾದವ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

Hosashake daily Koppal

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಕೊಪ್ಪಳ ಜಿಲ್ಲಾ ಯಾದವ್ ಸಮಾಜದ ನೂತನ ಅಧ್ಯಕ್ಷರಾಗಿ ಕುರಗೋಡ ರವಿ ಯಾದವ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ- ಕೊನೆಗೂ ಎಸ್‍ಐಟಿ ರಚಿಸಿದ ಸರ್ಕಾರ

ಕೃಷ್ಣಾ ನದಿ ನೀರು ಹಂಚಿಕೆ ವಿವಾದ – ಅಂತಿಮ ವರದಿ ಸಲ್ಲಿಕೆಗೆ ಜು.31ರವರೆಗೆ ಅವಧಿ ವಿಸ್ತರಣೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!