ಹೊಸಶಕೆ ನ್ಯೂಸ್-ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಏಪ್ರಿಲ್ 14 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಜರುಗಲಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ, ಸಂಸದರಾದ ಕೆ.ರಾಜಶೇಖರ ಬಸಬವರಾಜ ಹಿಟ್ನಾಳ, ಜಿಲ್ಲೆಯ ಶಾಸಕರು, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ, ಇತರ ಜನಪ್ರತಿನಿಧಿಗಳು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಕೊಪ್ಪಳ ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ್ ಅವರು ಉಪಸ್ಥಿತರಿರುವರು. ಕಾರ್ಯಕ್ರಮದ ನಿಮಿತ್ತ ಡಾ. ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರದ ಮೆರವಣಿಗೆಯು ಅಂದು ಬೆಳಿಗ್ಗೆ 8 ಗಂಟೆಗೆ ತಹಶೀಲ್ದಾರ ಕಛೇರಿಯಿಂದ ಸಾಲಾರಜಂಗ್ ರಸ್ತೆ, ಅಶೋಕ ವೃತ್ತದ ಮೂಲಕ ಸಾಹಿತ್ಯ ಭವನದವರೆಗೆ ನಡೆಯಲಿದೆ