ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ (ಕರ್ನಾಟಕ) ಲಿಮಿಟೆಡ್
ಬೆಂಗಳೂರು: ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ (ಕರ್ನಾಟಕ) ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಮಂಜುಳಾ ಎನ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಗೋವಿಂದ ರೆಡ್ಡಿ ಅವರನ್ನು ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯಲ್ಲಿ ಪ್ರಸ್ತುತ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ 2013 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಗೋವಿಂದ್ ರೆಡ್ಡಿ ಅವರು, ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಲಾಗಿದೆ.