Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ತುಂಗಭದ್ರಾ ಜಲಾಶಯದಿಂದ ಜು.02 ರಿಂದ ನ.30ರ ತನಕ ಕಾಲುವೆಗೆ ನೀರು

ಜುಲೈ ಎರಡು ಅಥವಾ ಮೂರನೇ ವಾರದಲ್ಲಿ ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಸಭೆ: ಸಚಿವ ತಂಗಡಗಿ

Hosashake News by Hosashake News
June 27, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ, ಸುದ್ದಿ
0
ತುಂಗಭದ್ರಾ ಜಲಾಶಯದಿಂದ ಜು.02 ರಿಂದ ನ.30ರ ತನಕ ಕಾಲುವೆಗೆ ನೀರು
Share on FacebookShare on Twitter

ಸಚಿವ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಯೋಜನೆ ಐಸಿಸಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಜೂ.27:ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 57 ಟಿಎಂಸಿ ನೀರಿನ ಸಂಗ್ರಹ ಇದ್ದು, ಜು.2 ರಿಂದ ನ.30ರವರೆಗೆ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ತುಂಗಭದ್ರಾ ಯೋಜನೆ ಹಾಗೂ ವಿಜಯನಗರ ಕಾಲುವೆಗಳ 124ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

 

ಸಭೆಯ ಬಳಿಕ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ತಂಗಡಗಿ ಅವರು, ಜಲಾಶಯದಲ್ಲಿನ‌ ನೀರಿನ ಸಂಗ್ರಹ ಲಭ್ಯತೆಯ ಮೇರೆಗೆ ನೀರಿನ ಬಳಕೆ ಮಾಡಲಾಗುತ್ತಿದೆ. ತುಂಗಭದ್ರ ಎಡದಂಡೆ ಮುಖ್ಯ ಕಾಲುವೆಗೆ ಜು. 2 ರಿಂದ ಜು. 15 ರವರೆಗೆ 2000 ಕ್ಯೂಸೆಕ್ ನಂತೆ, ಜು.16 ರಿಂದ ನ.31ರವರೆಗೆ 3000 ಕ್ಯೂಸೆಕ್ ನಂತೆ ಮತ್ತು ಆ.1ರಿಂದ ನ. 30ರವರೆಗೆ 4100 ಕ್ಯೂಸೆಕ್ ನಂತೆ ನೀರು ಹರಿಸಲಾಗುವುದು ಎಂದು ಹೇಳಿದರು.

ಸಭೆಯ ಬಳಿಕ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ತಂಗಡಗಿ ಅವರು, ಜಲಾಶಯದಲ್ಲಿನ‌ ನೀರಿನ ಸಂಗ್ರಹ ಲಭ್ಯತೆಯ ಮೇರೆಗೆ ನೀರಿನ ಬಳಕೆ ಮಾಡಲಾಗುತ್ತಿದೆ. ತುಂಗಭದ್ರ ಎಡದಂಡೆ ಮುಖ್ಯ ಕಾಲುವೆಗೆ ಜು. 2 ರಿಂದ ಜು. 15 ರವರೆಗೆ 2000 ಕ್ಯೂಸೆಕ್ ನಂತೆ, ಜು.16 ರಿಂದ ನ.31ರವರೆಗೆ 3000 ಕ್ಯೂಸೆಕ್ ನಂತೆ ಮತ್ತು ಆ.1ರಿಂದ ನ. 30ರವರೆಗೆ 4100 ಕ್ಯೂಸೆಕ್ ನಂತೆ ನೀರು ಹರಿಸಲಾಗುವುದು ಎಂದು ಹೇಳಿದರು.

ಬಲದಂಡೆ ಮೇಲ್ಮಟ್ಟದ ಕಾಲುವೆಗೆ ಜು.10ರಿಂದ ಜು.31ರವರೆಗೆ ಸರಾಸರಿ 700 ಕ್ಯೂಸೆಕ್ ನಂತೆ ಆ.1ರಿಂದ ನ. 30ರವರೆಗೆ 1300 ಕ್ಯೂಸೆಕ್, ಬಲದಂಡೆಯ ಕೆಳಮಟ್ಟದ ಕಾಲುವೆಗೆ 500 ಕ್ಯೂಸೆಕ್ , ಆ.1 ರಿಂದ ನ.31ರವರೆಗೆ 650 ಕ್ಯೂಸೆಕ್ ನೀರನ್ನು ಹರಿಸಲಾಗುವುದು.

ರಾಯ ಬಸವಣ್ಣ ಕಾಲುವೆಗೆ 220 ಕ್ಯೂಸೆಕ್ ಹಾಗೂ ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ 25 ಕ್ಯೂಸೆಕ್ ಅಥವಾ ಕಾಲುವೆಯಡಿ ನೀರಿನ ಲಭ್ಯತೆ ಆಧಾರದ ಮೇರೆಗೆ ನೀರು ಹರಿಸಲು ಸಲಹಾ ಸಮಿತಿಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

*ಜುಲೈ ಎರಡು ಅಥವಾ ಮೂರನೇ ವಾರದಲ್ಲಿ ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಸಭೆ*
ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆದಿದ್ದು, ಅಣೆಕಟ್ಟೆಯ ಸುರಕ್ಷತೆ ಮತ್ತು ಬೆಳೆ ಸಂರಕ್ಷಣೆ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಾಲ್ಕು ಜಿಲ್ಲೆಯ ಶಾಸಕರು ಹಾಗೂ ರೈತರನ್ನು ಒಳಗೊಂಡಂತೆ ಸಭೆ ನಡೆಸಬೇಕು ರೈತರು ಬೇಡಿಕೆ ಇಟ್ಟಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜುಲೈ 2ನೇ ವಾರ ಅಥವಾ ಮೂರನೇ ವಾರದಲ್ಲಿ ಸಭೆ ನಡೆಸಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ಅವರು ತಿಳಿಸಿದರು

ಬೋರ್ಡಿನ ಕೆಲ ಅಧಿಕಾರಿಗಳು ಈ ಬಾರಿ ಒಂದು ಬೆಳೆಗೆ ಮಾತ್ರ ನೀರು ನೀಡಲಾಗುವುದು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಎಂದು ರೈತರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಸಿದ ಸಚಿವರು ಇದೀಗ ಒಂದು ಬೆಳೆಗೆ ನೀರು ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ಸಭೆಯಲ್ಲಿ ಎರಡನೇ ಬೆಳೆಗೆ ನೀರು ನೀಡುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ರೈತರ ಹಿತಕರ ಪಾಡುವುದು ನಮ್ಮ ಉದ್ದೇಶ. ಇದರಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.

ಸಭೆಯಲ್ಲಿ ಸಚಿವರಾದ ಶರಣ್ ಪ್ರಕಾಶ್ ಪಾಟೀಲ್, ಜಮೀರ್ ಅಹ್ಮದ್, ಮಾಜಿ ಸಚಿವ ಬಿ.ನಾಗೇಂದ್ರ, ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ್,
ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಎಚ್.ಆರ್.ಗವಿಯಪ್ಪ, ಹಂಪನಗೌಡ ಬಾದರ್ಲಿ, ಬಸವನಗೌಡ ತುರುವಿಹಾಳ್, ಶಿವರಾಜ್ ಪಾಟೀಲ್, ಬಿ.ಎಂ.ನಾಗರಾಜ್, ರೈತ ಮುಖಂಡರು ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು = ಜಲಾಶಯದ 32 ಗೇಟ್ ಅನ್ನು ಬದಲಾವಣೆ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವರು ಆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಈ ಸಭೆಯಲ್ಲಿ ಅಣೆಕಟ್ಟೆಯ ಪರಿಣಿತ ತಜ್ಞರು ಪಾಲ್ಗೊಳ್ಳಲಿದ್ದಾರೆ : ಶಿವರಾಜ ತಂಗಡಗಿ=

Tags: Koppal TB Dam iCC meetingMeeting led by CM and DCM in second or third week of July: Minister ThangadgiTungabhadra Project ICC meeting chaired by Minister Shivraj ThangadagiWater from Tungabhadra reservoir to canal from July 2 to November 30ಜುಲೈ ಎರಡು ಅಥವಾ ಮೂರನೇ ವಾರದಲ್ಲಿ ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಸಭೆ: ಸಚಿವ ತಂಗಡಗಿತುಂಗಭದ್ರಾ ಜಲಾಶಯದಿಂದ ಜು.02 ರಿಂದ ನ.30ರ ತನಕ ಕಾಲುವೆಗೆ ನೀರುಸಚಿವ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಯೋಜನೆ ಐಸಿಸಿ ಸಭೆ
Previous Post

ಹೊಸಶಕೆ ದಿನಪತ್ರಿಕೆ

Next Post

ಹೊಸಶಕೆ ದಿನಪತ್ರಿಕೆ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ವಜ್ರಬಂಡಿ ಪ್ರಾಣೇಶ್ ರಾವ್ ದೇಸಾಯಿ ನಿಧನ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!