Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಬಹುಮುಖ್ಯವಾದುದು : ಐಜಿಪಿ ವರ್ತಿಕಾ ಕಟಿಯಾರ್

ಬಳ್ಳಾರಿ ವಿಭಾಗೀಯ ನೂತನ ಕಾನೂನು ಅಧಿಕಾರಿ (ಹಿರಿಯ) ಕಚೇರಿ ಉದ್ಘಾಟನೆ  

Hosashake News by Hosashake News
December 13, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜ್ಯ, ಶಿಕ್ಣಣ-ಆರೋಗ್ಯ, ಸಾಮಾಜಿಕ, ಸುದ್ದಿ
0
ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಬಹುಮುಖ್ಯವಾದುದು : ಐಜಿಪಿ ವರ್ತಿಕಾ ಕಟಿಯಾರ್
Share on FacebookShare on Twitter

ಹೊಸಶಕೆ ನ್ಯೂಸ್-ಬಳ್ಳಾರಿ: ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಬಹುಮುಖ್ಯವಾಗಿದೆ ಎಂದು ಬಳ್ಳಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕರಾದ ವರ್ತಿಕಾ ಕಟಿಯಾರ್ ಅವರು ಹೇಳಿದರು.

ಶನಿವಾರ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಬೆಂಗಳೂರು ಇವರ ಆಶ್ರಯದಲ್ಲಿ ನಗರದ ಹಳೆಯ ನ್ಯಾಯಾಲಯ ಆವರಣದ ಅಭಿಯೋಜಕ ಭವನದಲ್ಲಿ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನೂತನ ಕಾನೂನು ಅಧಿಕಾರಿ (ಹಿರಿಯ) ಯವರ ಬಳ್ಳಾರಿ ವಿಭಾಗೀಯ ಕಚೇರಿಯ ಉದ್ಘಾಟನೆ ನೆರವೇರಿಸಿ ಬಳಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಭಿಯೋಜಕರು ಮತ್ತು ತನಿಖಾಧಿಕಾರಿಗಳ ನಡುವೆ ಸಮನ್ವಯತೆ ಸಾಧಿಸಬೇಕು. ತನಿಖಾಧಿಕಾರಿಗಳು ಯಾವ ರೀತಿಯಾಗಿ ದೋಷರೋಪಣಾ ಪಟ್ಟಿ ತಯಾರಿಸಬೇಕು. ಅದಕ್ಕಿರುವ ಕಾನೂನು ಕ್ರಮ ಹಾಗೂ ಇತರೆ ಕುರಿತಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಕಾನೂನು ಹಿರಿಯ ಅಧಿಕಾರಿಗಳು ಚರ್ಚಿಸಿದ್ದು, ಮುಂದೆಯೂ ನಿರಂತರ ಚರ್ಚಿಸುವರು. ಇದರಿಂದ ಜನಸಾಮಾನ್ಯರಿಗೆ ನ್ಯಾಯ ದೊರಕಿಸಲು ಅಭಿಯೋಜಕರ ಪಾತ್ರದೊಂದಿಗೆ ಪರಿಣಾಮಕಾರಿಯಾಗಿ ಸಾಧ್ಯವಾಗಲಿದೆ ಎಂದು ಹೇಳಿದರು.

ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ಪ್ರಸ್ತುತದ ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದಮೇಲೆ ಕಾನೂನು ವ್ಯವಸ್ಥೆಯಲ್ಲಿ ಹಲವಾರು ಬದಲಾವಣೆಗಳನ್ನು ಜಾರಿಗೊಳಿಸಲಾಗಿದೆ. ಸಂತ್ರಸ್ತರು ಇರುವಲ್ಲಿಯೇ ನ್ಯಾಯ ಅವರ ಹತ್ತಿರವಾಗುತ್ತಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲಬುರಗಿ ವಿಭಾಗದ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ವಿಜಯನಗರ ಸೇರಿ ನಾಲ್ಕು ಜಿಲ್ಲೆಗಳಿಗೆ ಬಳ್ಳಾರಿ ವಲಯ ಕಚೇರಿ ಸೇವೆ ನೀಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಕೇವಲ 2 ತಿಂಗಳಲ್ಲಿ ಕಟ್ಟಡ ಗುರುತಿಸಿ ಅದನ್ನು ಆರಂಭಿಸಿರುವುದು ಕಾನೂನು ಹಿರಿಯ ಅಧಿಕಾರಿಯವರ ಕಾರ್ಯ ವೈಖರಿ ಪ್ರತಿಬಿಂಬಿಸುತ್ತಿದೆ ಎಂದರು.

ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಬೆಂಗಳೂರಿನ ನಿರ್ದೇಶಕರಾದ ಅಂಜಲಿದೇವಿ, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿದರು.  ಕಾರ್ಯಕ್ರಮದಲ್ಲಿ ‘ನೊಂದವರಿಗೆ ನ್ಯಾಯ’ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ,  ‘ನ್ಯಾಯ ಜ್ಯೋತಿ’ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು ಮತ್ತು ಬಳ್ಳಾರಿ ವಿಭಾಗೀಯ ಕಚೇರಿಯ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ದಿ, ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ., ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ಬಾಬು, ಲೋಕೋಪಯೋಗಿ ಇಲಾಖೆ ವಿಭಾಗದ ಕಾರ್ಯಪಾಲಕ ಅಭಿಯಂತರ ಹೇಮರಾಜ.ಕೆ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮಬ್ರಹ್ಮಂ ಸೇರಿದಂತೆ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಅಧಿಕಾರಿಗಳು, ವಕೀಲರು ಸೇರಿದಂತೆ ಇತರರು ಉಪಸ್ಥಿತರಿದ್ದರು.

==ಜಿಲ್ಲೆಗೆ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನೂತನ ಕಾನೂನು ಅಧಿಕಾರಿ (ಹಿರಿಯ) ಯವರ ಬಳ್ಳಾರಿ ವಿಭಾಗೀಯ ಕಚೇರಿಯು 2022 ರಲ್ಲಿಯೇ ಕಲಬುರಗಿ ವಿಭಾಗದಿಂದ ಬೇರ್ಪಟ್ಟು ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳು ಒಳಗೊಂಡು ವಿಭಾಗೀಯ ಕಚೇರಿ ಮಂಜೂರಾಗಿತ್ತು. ಸ್ಥಳದ ಕೊರತೆಯಿಂದ ಆರಂಭಗೊಂಡಿರಲಿಲ್ಲ. ಅದು ಈಗ ಕೂಡಿಬಂದಿದ್ದು, ನಾಲ್ಕು ಜಿಲ್ಲೆಗಳ ವಿಶೇಷಾಸಕ್ತಿ ವಹಿಸಲು ಸರ್ಕಾರ ಅವಕಾಶ ನೀಡಿದೆ : ಬಿ.ಎಸ್.ಪಾಟೀಲ, ಬಳ್ಳಾರಿ ವಿಭಾಗೀಯ ಕಚೇರಿಯ ನೂತನ ಕಾನೂನು ಅಧಿಕಾರಿ (ಹಿರಿಯ)ಗಳು

Tags: B S Patil KoppalB.S. PatilBallery IGP Vartika Katiyar NewsBallery News HosashakeInauguration of the new Bellary Divisional Law Officer (Senior) officethe new Law Officer (Senior) of Bellary Divisional OfficeThe role of prosecutors is crucial in the criminal justice system: IGP Vartika Katiyarಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಬಹುಮುಖ್ಯವಾದುದು : ಐಜಿಪಿ ವರ್ತಿಕಾ ಕಟಿಯಾರ್ಬಳ್ಳಾರಿ ವಿಭಾಗೀಯ ಕಚೇರಿಯ ನೂತನ ಕಾನೂನು ಅಧಿಕಾರಿ (ಹಿರಿಯ)ಗಳುಬಳ್ಳಾರಿ ವಿಭಾಗೀಯ ನೂತನ ಕಾನೂನು ಅಧಿಕಾರಿ (ಹಿರಿಯ) ಕಚೇರಿ ಉದ್ಘಾಟನೆಬಿ.ಎಸ್.ಪಾಟೀಲ
Previous Post

ಹೊಸಶಕೆ

Next Post

ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ ಆದಾಲತ್ ನಲ್ಲಿ 6764 ಪ್ರಕರಣಗಳು ಇತ್ಯರ್ಥ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!