Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಲಸಿಕೆಯಿಂದ ಯಾವುದೇ ಮಗು ವಂಚಿತವಾಗದಂತೆ ಎಚ್ಚರ ವಹಿಸಿ: ಡಾ.ಸುರೇಶ ಬಿ. ಇಟ್ನಾಳ

Hosashake News by Hosashake News
October 13, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜ್ಯ, ಶಿಕ್ಣಣ-ಆರೋಗ್ಯ, ಸಾಮಾಜಿಕ
0
ಲಸಿಕೆಯಿಂದ ಯಾವುದೇ ಮಗು ವಂಚಿತವಾಗದಂತೆ ಎಚ್ಚರ ವಹಿಸಿ: ಡಾ.ಸುರೇಶ ಬಿ. ಇಟ್ನಾಳ
Share on FacebookShare on Twitter

ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ: ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ

ಹೊಸಶಕೆ ನ್ಯೂಸ್-ಕೊಪ್ಪಳ: ಮಗುವಿನ ಆರೋಗ್ಯದ ಬಗ್ಗೆ ಅತಿ ಹೆಚ್ಚಿನ ಕಾಳಜಿ ವಹಿಸಲು ಮತ್ತು ನಿಗದಿತ ಸಮಯಕ್ಕೆ ಲಸಿಕೆ ಹಾಕುವಂತೆ ಸ್ಥಳೀಯವಾಗಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಸೂಕ್ತ ಸಮಯದಲ್ಲಿ ತಿಳಿವಳಿಕೆ ಮೂಡಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಲಸಿಕೆಯಿಂದ ಯಾವುದೇ ಮಗು ವಂಚಿತವಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಸೂಚನೆ ನೀಡಿದರು.

ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ  ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಜಿಲ್ಲೆಯಲ್ಲಿನ ತಾಯಿ-ಮಗು ಮರಣ ಸಂಖ್ಯೆಯನ್ನು ತಗ್ಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಹಾಗೂ ಮಾರ್ಚ್ ಅಂತ್ಯದವರೆಗೂ ಯಾವುದೇ ತಾಯಿ-ಮಗು ಮರಣ ಪ್ರಕರಣ ದಾಖಲಾಗದಂತೆ ಕ್ರಮ ವಹಿಸಿ. ಅಧಿಕಾರಿ, ವೈದ್ಯರ ಕರ್ತವ್ಯದಲ್ಲಿ ಪ್ರಾಮಾಣಿಕತೆ ಇರಲಿ ಎಂದರು.   ಮಗು ಜನಿಸಿದ 24 ಗಂಟೆಯೊಳಗೆ ಹಾಕಬೇಕಾದ ಕಡ್ಡಾಯ ಲಸಿಕೆಗಳು, ಮಗುವಿನ ಬೆಳವಣಿಗೆಯ ವಿವಿಧ ಹಂತಗಳಲ್ಲಿ ಹಾಕಬೇಕಾದ ಲಸಿಕೆಗಳು, ಲಸಿಕೆಯಿಂದ ಮಗುವಿಗೆ ಆಗುವ ಆರೋಗ್ಯ ಪ್ರಯೋಜನಗಳು, ಲಸಿಕೆ ಹಾಕಿಸದೇ ಇರುವುದರಿಂದ ಆಗುವ ತೊಂದರೆಗಳು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಪ್ರತಿಯೊಬ್ಬ ತಾಯಂದಿರಿಗೆ ಗೊತ್ತಿರಬೇಕು. ಹಾಗಾಗಿ ಸಂಬಂಧಿಸಿದ ಅಧಿಕಾರಿಗಳು ಅವರಿಗೆ ತಿಳಿವಳಿಕೆ ಮೂಡಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಅರ್ಹವಿರುವ ಪ್ರತಿಯೊಬ್ಬ ಮಗುವಿಗೂ ಲಸಿಕೆ ಹಾಕಿಸಲು ಕ್ರಮಕೈಗೊಳ್ಳಬೇಕು. ಈ ಕಾರ್ಯಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯವರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಲಿಂಗರಾಜು ಟಿ., ಎಸ್.ಎಂ.ಓ ಡಾ.ಶ್ರೀಧರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರವೀಂದ್ರನಾಥ ಎಂ.ಹೆಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ್, ಸ್ತ್ರೀರೋಗ ತಜ್ಞರಾದ ಡಾ. ಈಶ್ವರ ಸವಡಿ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಪ್ರಕಾಶ ಹೆಚ್. ಸೇರಿದಂತೆ ಎಲ್ಲಾ ತಾಲೂಕುಗಳ ಆರೋಗ್ಯಾಧಿಕಾರಿಗಳು, ತಜ್ಞ ವೈದ್ಯರು, ವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Ensure that no child is deprived of vaccination: Dr. Suresh B. ItnalKoppalKoppal Daily NewsKoppal DC news at HosashakeNational Universal Vaccination Program: District Level Awareness Committee Meetingರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ: ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಲಸಿಕೆಯಿಂದ ಯಾವುದೇ ಮಗು ವಂಚಿತವಾಗದಂತೆ ಎಚ್ಚರ ವಹಿಸಿ: ಡಾ.ಸುರೇಶ ಬಿ. ಇಟ್ನಾಳ
Previous Post

ಯಲಬುರ್ಗಾದ ಪತ್ರಕರ್ತ ಖಾಜಾವಲಿ ಜರಕುಂಟಿ ನಿಧನ

Next Post

ಹಿರಿಯರು ಹಾಕಿಕೊಟ್ಟ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗಬೇಕು: ವೀರಣ್ಣ ಮತ್ತಿಕಟ್ಟಿ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!