ಹೊಸಶಕೆ ನ್ಯೂಸ್-ಕೊಪ್ಪಳ: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ನಾಗರಿಕರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವದರ ಜೊತೆ ಸ್ವಚ್ಛತೆಗೆ ಹೆಚ್ಚಿನ ಆದತ್ಯೆಯನ್ನು ನೀಡುವುಂತೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ ಅವರು ಸೂಚನೆ ನೀಡಿದರು.

ಗುರುವಾರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಗಳ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿ, ಸಿಬ್ಬಂದಿಯವರು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು, ನಾಗರಿಕ ಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಮಾಣಿಕವಾಗಿ ಕಾರ್ಯನಿರ್ವಹಿಸಲು ತಿಳಿಸದರು.

ಜಿಲ್ಲೆಯ ಒಂಬತ್ತು ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಠಾನ ದಲ್ಲಿರುವ ಯೋಜನೆ, ಕಾಮಗಾರಿ ಸೇರಿದಂತೆ ಸರ್ಕಾರದ ಕಾರ್ಯಕ್ರಮಗಳ ಸರ್ಮಪಕ ಜಾರಿ, ಮತ್ತು ಜನರಿಗೆ ತಲುಪಿಸಬೇಕು, ನಿಗದಿತ ಕಾಲಾವಧಿಯಲ್ಲಿ ಕಾಮಗಾರಿಗಳು ಪೂರ್ಣಗೊಳಿಸಲು ಸೂಚಿಸಿದ ಅವರು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಹೇಳಿದರು. ನಗರ ಮತ್ತು ಪಟ್ಟಣಗಳಲ್ಲಿ ಸಂಪೂರ್ಣವಾಗಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸಬೇಕು,
ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆಗಳು ಸಿಗಬೇಕು, ಒದಗಿಸಬೇಕು , ಎಲ್ಲಾ ನಗರಗಳಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಪುಟ್ಪಾತ್ ನ್ನು ಕೂಡಲೇ ತೆರವುಗೊಳಿಸಿ ಸಾರ್ವಜನಿಕರಿಗೆ ಮುಕ್ತವಾಗಿರಿಸಲು ಅಗತ್ಯ ಕ್ರಮಗಳನ್ನು ಸೂಚಿಸಿದರು,

ಸರ್ಕಾರದ ನಿಯಮಾನುಸಾರ
ಕಡ್ಡಾಯವಾಗಿ ಇ-ಖಾತೆಗಳನ್ನು ವಿತರಿಸಿ ಪ್ರಗತಿ ಸಾಧಿಸಲು ಪ್ರಯತ್ನಿಸಬೇಕು,
ನಿಗದಿತ ಅವಧಿಯಲ್ಲಿ ಪ್ರಗತಿ ಸಾಧಿಸದ ಅಧಿಕಾರಿ ಹಾಗೂ ಸಿಬ್ಬಂದಿ ಸಿಬ್ಬಂದಿ ವರ್ಗಕ್ಕೆ ಶಿಸ್ತು ಕ್ರಮ ಕೈಗೊಳ್ಳುವುದಾದಗಿ ಎಚ್ಚರಿಸಿದ ಅವರು, ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ತಮ್ಮ ಜವಾಬ್ದಾರಿ ಯನ್ನು ಪ್ರಮಾಣಿಕವಾಗಿ ಕಾರ್ಯನಿರ್ವಹಿಸಬೇಕು, ನಗರ, ಪಟ್ಟಣಗಳ ಎಲ್ಲಾ ವಾರ್ಡ್ ಗಳ ಭೇಟಿ ನೀಡಿ ಜನರ ಸಲಹೆ ಸೂಚನೆಗಳನ್ನು ದಾಖಲಿಸಿಕೊಂಡು, ಅಗತ್ಯ ಯೋಜನೆಗಳನ್ನು ಹಾಕಿಕೊಳ್ಳಲು ತಿಳಿಸಿದರು
ಸಭೆಯಲ್ಲಿ ಜಿಲ್ಲಾ ನಗರ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರ್, ಜಿಲ್ಲೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಇದ್ದರು.