Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಬಳ್ಳಾರಿಯಲ್ಲಿಯೇ ಮೆಗಾಡೇರಿ ನಿರ್ಮಾಣ ನೂತನ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್

ಕೊಳಗಲ್ಲು ಗ್ರಾಮದಲ್ಲಿ ಮೇಗಾಡೇರಿ ಸ್ಥಳ ಪರಿಶೀಲನೆ

Hosashake News by Hosashake News
August 8, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ
0
ಬಳ್ಳಾರಿಯಲ್ಲಿಯೇ ಮೆಗಾಡೇರಿ ನಿರ್ಮಾಣ ನೂತನ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್
Share on FacebookShare on Twitter

ಹೊಸಶಕೆ ನ್ಯೂಸ್-ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿಯೇ ಮೆಗಾಡೇರಿ ನಿರ್ಮಿಸಲಾಗುವುದು ಎಂದು ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಹೇಳಿದರು.

ಶುಕ್ರವಾರದಂದು ನಗರದ ಕೆಎಂಎಫ್‌ನ ಡೈರಿ ಆಡಳಿತ ಮಂಡಳಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೆಗಾಡೇರಿ ನಿರ್ಮಾಣಕ್ಕೆ ಬಳ್ಳಾರಿ ತಾಲ್ಲೂಕಿನ ಕೊಳಗಲ್ಲು ಗ್ರಾಮದ ಬಳಿಯ 15 ಎಕರೆ ಪ್ರದೇಶವನ್ನು ಈಗಾಗಲೇ ಗುರುತಿಸಲಾಗಿದ್ದು, ಈಗಾಗಲೇ ಜಿಲ್ಲಾಡಳಿತಕ್ಕೆ ನೀಡಬೇಕಿರುವ 2.92 ಕೋಟಿ ರೂ. ಹಣ ನೀಡುವ ಬಗ್ಗೆ ನಿರ್ದೇಶಕ ಆಡಳಿತ ಮಂಡಳಿ ಸಭೆಯಲ್ಲಿ ಅನುಮೋದಿಸಲಾಗಿದೆ. ದೇಶದಲ್ಲಿಯೇ ಮಾದರಿ ಮೆಗಾಡೇರಿಯನ್ನಾಗಿ ಬಳ್ಳಾರಿಯಲ್ಲಿ ಸ್ಥಾಪಿಸಲಾಗುವುದು ಎಂದರು.

ರಾಬಕೊವಿ ವ್ಯಾಪ್ತಿಯಲ್ಲಿ ಹಾಲು ಉತ್ಪಾದನೆಗೆ ಹೆಚ್ಚಿನ ಸಹಕಾರ ನೀಡಲಾಗುವುದು. ಈಗಾಗಲೇ ಕೆಎಂಎಫ್ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ಪಶು ವೈದ್ಯಾಧಿಕಾರಿಗಳನ್ನು ನೇಮಿಸಿ ಜಿಲ್ಲಾವಾರು ಹಂಚಿಕೆ ಮಾಡಲಾಗಿದೆ, ಪ್ರಸ್ತುತ ರಾಬಕೊವಿ ಜಿಲ್ಲಾ ಹಾಲು ಒಕ್ಕೂಟವು 2.43 ಲಕ್ಷ ಲೀ. ಹಾಲು ಉತ್ಪಾದನೆ ಇದೆ. ಅದರಲ್ಲಿ ಬಳ್ಳಾರಿ ಜಿಲ್ಲೆಯು 10 ಸಾವಿರ ಲೀ., ವಿಜಯನಗರ ಜಿಲ್ಲೆಯು 1.12 ಲಕ್ಷ ಲೀ., ಕೊಪ್ಪಳ ಜಿಲ್ಲೆಯು 70 ಸಾವಿರ ಲೀ ಮತ್ತು ರಾಯಚೂರು ಜಿಲ್ಲೆಯು 26 ಸಾವಿರ ಲೀ. ಉತ್ಪಾದನೆ ಇದೆ ಎಂದು ತಿಳಿಸಿದ ಅವರು, ನಾಲ್ಕು ಜಿಲ್ಲೆಗಳಲ್ಲಿ ಹಾಲಿನ ಉತ್ಪಾದನೆ ಹೆಚ್ಚಿಸಲು ಹಲವಾರು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಮೆಗಾಡೇರಿ ನಿರ್ಮಾಣದ ಕಾಮಗಾರಿಯ ಭೂಮಿಪೂಜೆ ಕಾರ್ಯ ನೆರವೇರಿಸಲು ಕ್ರಿಯಾಯೋಜನೆ ಹಂತ-ಹಂತವಾಗಿ ಕಾರ್ಯರೂಪಕ್ಕೆ ತಂದು ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಹೇಳಿದರು. ರಾಬಕೊವಿ ಒಕ್ಕೂಟದ ಕಚೇರಿಯಲ್ಲಿ ಮೊದಲ ಬಾರಿಗೆ ಆಡಳಿತ ಮಂಡಳಿಯ ನಿರ್ದೇಶಕರ ಸಭೆ ನಡೆಸಲಾಗಿದೆ. ರೈತರಿಗೆ ಅನುಕೂಲವಾಗುವಂತಹ ಹಲವಾರು ಅಭಿವೃದ್ಧಿದಾಯಕ ವಿಷಯಗಳನ್ನು ಚರ್ಚಿಸಲಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕಾರಟಗಿಯ ಎನ್.ಸತ್ಯನಾರಾಯಣ, ವ್ಯವಸ್ಥಾಪಕ ನಿರ್ದೇಶಕ ಬಿ.ಆರ್.ಪ್ರಭುಶಂಕರ್ ಹಾಗೂ ಇತರರಿದ್ದರು.  ಇದಕ್ಕೂ ಮುನ್ನ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಸೇರಿದಂತೆ ಇತರರೊಡನೆ ಕೊಳಗಲ್ಲು ಗ್ರಾಮದಲ್ಲಿ ಮೇಗಾಡೇರಿ ಸ್ಥಾಪಿಸಲು ಗುರುತಿಸಿದ ಸ್ಥಳವನ್ನು ಪರಿಶೀಲನೆ ಮಾಡಿದರು.

==ರಾಬಕೋವಿ ಜಿಲ್ಲಾ ಹಾಲು ಒಕ್ಕೂಟಗಳ ಡೇರಿಗಳ ನಿರ್ವಹಣೆಗೆ ಅನುದಾನ ಮೀಸಲಿರಿಸಲಾಗಿದೆ. ಬಳ್ಳಾರಿ ಡೇರಿಗೆ 1 ಕೋಟಿ ರೂ., ಕೊಪ್ಪಳದ ಬೂದುಗುಂಪಾ ಡೇರಿಗೆ ಸುಮಾರು 4 ರಿಂದ 5 ಕೋಟಿ ರೂ. ಹಾಗೂ ರಾಯಚೂರಿಗೆ ಡೇರಿಗೆ ಕೆಕೆಆರ್‌ಡಿಬಿಯ ಮ್ಯಾಕ್ರೋ ಯೋಜನೆಯಡಿ ರೂ.10 ಕೋಟಿ ಮನವಿ ಸಲ್ಲಿಸಲಾಗಿದೆ, ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ 860 ಸೊಸೈಟಿಗಳಿವೆ. ಇದರಲ್ಲಿ ಹಲವು ಸೊಸೈಟಿಗಳು ಕಾರ್ಯನಿರ್ವಹಿಸುತ್ತಿಲ್ಲ. ಮುಂಬರುವ ದಿನಗಳಲ್ಲಿ ಪ್ರತಿ ತಾಲ್ಲೂಕಿನಲ್ಲಿ ಮೂರು ಸೊಸೈಟಿಗಳನ್ನು ಸ್ಥಾಪಿಸಲಾಗುವುದು. ಒಟ್ಟಾರೆಯಾಗಿ ಹಾಲಿನ ಉತ್ಪಾದನೆಯನ್ನು 2.43 ಲಕ್ಷ ಲೀಟರ್ ನಿಂದ 5 ಲಕ್ಷ ಲೀಟರ್ ಗೆ ಹೆಚ್ಚಿಸುವ ಗುರಿಯನ್ನು ಒಂದಲಾಗಿದೆ : ರಾಘವೇಂದ್ರ ಹಿಟ್ನಾಳ್, ಶಾಸಕರು ಹಾಗೂ ಅಧ್ಯಕ್ಷರು ರಾಬಕೊವಿ, ==

Tags: Bellary News Karnatakamega dairy in BellaryRaghavendra Hitnal to mega dairy in Bellaryಬಳ್ಳಾರಿಯಲ್ಲಿಯೇ ಮೆಗಾಡೇರಿ ನಿರ್ಮಾಣ ನೂತನ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್
Previous Post

ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ  ನಡೆದಿದೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ರ್ಯಾಲಿ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಬಳ್ಳಾರಿಯಲ್ಲಿಯೇ ಮೆಗಾಡೇರಿ ನಿರ್ಮಾಣ ನೂತನ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್

ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ  ನಡೆದಿದೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ರ್ಯಾಲಿ

ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಜೆಡಿಎಸ್ ನಾಯಕ ಸಿ ವಿ ಚಂದ್ರಶೇಖರ್ ಭೇಟಿ

ಕೊಪ್ಪಳ : ಕೊಲೆಯಾದ ಗವಿಸಿದ್ಧಪ್ಪನ ಮನೆಗೆ ಮುಸ್ಲಿಂ ಸಮಾಜದ ಮುಖಂಡರ ಭೇಟಿ

ಅಗ್ನಿವೀರ್ ಸೇನಾ ಭರ್ತಿ: ಮೊದಲ‌ ದಿನ ಕೊಪ್ಪಳ ಜಿಲ್ಲೆಯ 518 ಯುವಕರು ಮುಂದಿನ ಹಂತಕ್ಕೆ ಆಯ್ಕೆ

ಹೊಸಶಕೆ‌ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!