ಹೊಸಶಕೆ ನ್ಯೂಸ್-ಕೊಪ್ಪಳ : ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಕೃಷ್ಣಮೂರ್ತಿ ದೇಸಾಯಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.