Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಅಲ್ಪಸಂಖ್ಯಾತರ ಅರ್ಹ ಫಲಾನುಭವಿಗಳಿಗೆ ಅಗತ್ಯ ಸೌಲಭ್ಯ: ಜಿಲ್ಲಾಧಿಕಾರಿ ನಲಿನ್ ಅತುಲ್

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ

Hosashake News by Hosashake News
February 13, 2025
in ಜಿಲ್ಲೆ
0
ಅಲ್ಪಸಂಖ್ಯಾತರ ಅರ್ಹ ಫಲಾನುಭವಿಗಳಿಗೆ ಅಗತ್ಯ ಸೌಲಭ್ಯ: ಜಿಲ್ಲಾಧಿಕಾರಿ ನಲಿನ್ ಅತುಲ್

????????????????????????????????????

Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ : ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಮುದಾಯದ ಅರ್ಹ ಫಲಾನುಭವಿಗಳನ್ನ ಹುಡುಕಿ, ಅವರಿಗೆ ಸರ್ಕಾರಿದಿಂದ ಇರುವ ಸೌಲಭ್ಯ ಒದಗಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು.
ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ, ಸಿಕ್, ಪಾರ್ಸಿ, ಬೌದ್ಧ ಮುಂತಾದ ಸಮುದಾಯಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ವಿವಿಧ ಇಲಾಖೆಗಳ ಯೋಜನೆಗಳಲ್ಲಿ ಶೇ.15 ರಷ್ಟು ಮಿಸಲಾತಿಯನ್ನು ಅಲ್ಪಸಂಖ್ಯಾತರಿಗೆ ನೀಡಬೇಕು. ಈ ಕಾರ್ಯಕ್ರಮದಡಿ ಬರುವ ಎಲ್ಲಾ ಇಲಾಖೆಗಳು ಅರ್ಹ ಫಲಾನುಭವಿಗಳನ್ನ ಗುರುತಿಸಿ, ಅವರಿಗೆ ಮೂಲಭೂತ ಸೌಕರ್ಯಗಳನ್ನ ನೀಡಬೇಕು. ಯೋಜನೆಗಳಡಿ ಆಯಾ ಇಲಾಖೆಗಳು ತಮಗೆ ನೀಡಲಾದ ಗುರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಸಾಮಾಜಿಕ ಮತ್ತು ಅರ್ಥಿಕವಾಗಿ ಸಬಲೀಕರಣಗೊಳಿಸಲು ಸಾಲ ಸೌಲಭ್ಯ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ವೃತ್ತಿಪರ ಕೌಶಲ್ಯ ತರಬೇತಿ ನೀಡಲು ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಕೊಪ್ಪಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸದಸ್ಯರಾದ ಮಹಮ್ಮದ್ ನಜೀರುದ್ದಿನ್, ಮೆಹಬೂಬ್ ಪಾಶ, ಪ್ರಶಾಂತ ಎಸ್ ದೇಸಾಯಿ, ಸಮೀನಾ ಬೇಗಂ, ಎಂ.ಮದಾರವಲಿ ಸಾಬ್ ಹಾಗೂ ಎಂ.ಡಿ ಸಿರಾಜ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

==ಪೋಸ್ಟರ್ ಬಿಡುಗಡೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗಾಗಿ 6ನೇ ತರಗತಿಯ ಪ್ರವೇಶಾತಿ ಪ್ರಕಟಣೆಯ ಪೋಸ್ಟರ್‌ಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

Previous Post

ಕಾರ್ಖಾನೆಗಳಿಂದ ಭೂಮಿ, ನೀರು, ಗಾಳಿ, ಆಹಾರ ಮಾಲಿನ್ಯ ಎಂಎಲ್ಸಿ ಹೇಮಲತಾ ನಾಯಕ

Next Post

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ :ಡಾ. ಶಾಲಿನಿ ರಜನೀಶ್

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!