ಹೊಸಶಕೆ ನ್ಯೂಸ್-ಕೊಪ್ಪಳ:ಕೊಪ್ಪಳ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಗೆ ಹಿಂದುಳಿದ ವರ್ಗದಡಿ ಅಧಿಕಾರೇತರ ಸದಸ್ಯರನ್ನಾಗಿ ಕಾಂಗ್ರೆಸ್ ನ ಮುಖಂಡರು, ಜಿಲ್ಲಾ ಯಾದವ ಸಮಾಜದ ಅಧ್ಯಕ್ಷರಾದಕುರುಗೋಡ ರವಿ ಯಾದವ ಅವರನ್ನುನಾಮನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ನೇಮಕವಾಗಿದ್ದ ನಾಗಪ್ಪ ಹುಗ್ಗಿ ಬಿನ್ ಹನುಮಂತಪ್ಪ ಹುಗ್ಗಿ ಶಿರಿವಾರ, ಕನಕಗಿರಿ ಇವರ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದು, ಕುರುಗೋಡ ರವಿ ಯಾದವ, ಕೊಪ್ಪಳ ಇವರನ್ನು ಕೊಪ್ಪಳ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಗೆ ಹಿಂದುಳಿದ ವರ್ಗದಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿಸರ್ಕಾರದ ಅಧೀನ ಕಾರ್ಯದರ್ಶಿ (ಎಸ್ 3) ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯು ಆದೇಶ ಹೊರಡಿಸಿತು ಹೊರಡಿಸಿದೆ.
