Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ: ಸಿದ್ದರಾಮಯ್ಯ

ಶ್ರೀ ಬಿ ಎಸ್ ಪಾಟೀಲ ಇವರಿಗೆ 2025 ನೇ ಸಾಲಿನ ಪ್ರತಿಷ್ಠಿತ ಚಂದನ ಶ್ರೀ ಪ್ರಶಸ್ತಿ ಪ್ರಧಾನ

Hosashake News by Hosashake News
December 13, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜಕೀಯ, ರಾಜ್ಯ, ಶಿಕ್ಣಣ-ಆರೋಗ್ಯ, ಸಾಮಾಜಿಕ, ಸುದ್ದಿ
0
ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ: ಸಿದ್ದರಾಮಯ್ಯ
Share on FacebookShare on Twitter

ಹೊಸಶಕೆ ನ್ಯೂಸ್-ಗದಗ: ಭ್ರಾತೃತ್ವ, ಸ್ವಾತಂತ್ರ್ಯ , ಸಮಾನತೆಗಳನ್ನು ಸಂವಿಧಾನ ತಿಳಿಸಿದ್ದು, ಇದು ಅಕ್ಷರಶ: ಜಾರಿಯಾಗದೇ, ಜಾತಿ ವ್ಯವಸ್ಥೆಯಾಗಲಿ, ಅಸಮಾನತೆಯಾಗಲಿ ಹೋಗುವುದಿಲ್ಲ. ಮಾನವರಾಗಿ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಶಿಕ್ಷಣ ಅಗತ್ಯ  ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಂದನ ಎಜುಕೇಶನ್ ಸೊಸೈಟಿ ಲಕ್ಷ್ಮೇಶ್ವರ ಇವರ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ಭಾರತ ರತ್ನ ಪ್ರೋ  ಸಿ ಎನ್ ಆರ್ ರಾವ್ 10 ನೇ ವರ್ಷದ ವಿಜ್ಞಾನ ವಿಸ್ಕೃತ ಕಾರ್ಯಕ್ರಮ-2025 ಹಾಗೂ ಶ್ರೀ ಬಿ ಎಸ್ ಪಾಟೀಲ ಇವರಿಗೆ 2025 ನೇ ಸಾಲಿನ ಪ್ರತಿಷ್ಠಿತ ಚಂದನ ಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕು ,ಅದಕ್ಕೆ ಮೌಢ್ಯ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದೆವು. ಬಸವಣ್ಣನವರ ನಾಡಿನಲ್ಲಿ ಹುಟ್ಟಿದ ನಾವು ಇಂದಿಗೂ ಕೂಡ ಮೌಢ್ಯಗಳನ್ನು ಆಚರಿಸಲಾಗುತ್ತಿರುವುದು ದುರ್ದೈವದ ಸಂಗತಿ. ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕುಶಿಕ್ಷಣವೆಂಬುದು ಒಂದು ವರ್ಗಕ್ಕೆ ಸೀಮಿತವಾಗಿಲ್ಲ ಎಲ್ಲ ಧರ್ಮಗಳೂ ಮಾನವೀಯತೆಯನ್ನು ಬೋಧಿಸುತ್ತವೆ ಎಂದರು.  ಪಟ್ಟಭದ್ರಹಿತಾಸಕ್ತಿಗಳು ಧರ್ಮವನ್ನು ತಪ್ಪಾಗಿ ಅರ್ಥೈಸುತ್ತಿದ್ದಾರೆ. ಕಷ್ಟದಲ್ಲಿದ್ದಾಗ ತನ್ನ ಹಣೆಬರಹವೆಂದು ಸುಮ್ಮನಿರದೇ, ಇಚ್ಛಾಶಕ್ತಿಯಿಂದ ಶ್ರಮಿಸಿದರೆ, ಯಾವುದೇ ವರ್ಗದವರೂ ಕೂಡ ಸಾಧನೆಗಳನ್ನು ಮಾಡಬಹುದಾಗಿದೆ. ಶಿಕ್ಷಣವೆಂಬುದು ಒಂದು ವರ್ಗಕ್ಕೆ ಸೀಮಿತವಾದುದಲ್ಲ. ಪ್ರಾಮಾಣಿಕ ಪ್ರಯತ್ನ ಮತ್ತು ಅವಕಾಶಗಳನ್ನು ಸದುಪಯೋಗ ಪಡೆದು, ಉನ್ನತ ಸ್ಥಾನಕ್ಕೆ ತಲುಪಬಹುದು. ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ವಿಜ್ಞಾನದ ಉದ್ದೇಶ ಎಂದರು.

ಪ್ರತಿಯೊಬ್ಬ ಭಾರತೀಯ ವಿದ್ಯಾರ್ಥಿ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆಯನ್ನು ಬೆಳೆಸಿಕೊಳ್ಳಬೇಕು, ಸಿ.ಎನ್.ಆರ್  ರಾವ್ ಈ ದೇಶ ಕಂಡ ಅಪರೂಪದ ವಿಜ್ಞಾನಿ. ಎಸ್.ಎಸ್.ಎಲ್.ಸಿ ವರೆಗೆ ಕನ್ನಡ ಮಾಧ್ಯಮದಲ್ಲಿಯೇ ಕಲಿತವರು. ಪಾಟೀಲರು ಆಂಗ್ಲ ಮಾಧ್ಯಮ ಕಲಿತವರು.  ಸಿ.ಎನ್.ಆರ್ ವಿಜ್ಞಾನದಲ್ಲಿ ಅತ್ಯಂತ ಎತ್ತರಕ್ಕೆ ಬೆಳೆದವರು.ಸಂಶೋಧನೆಯನ್ನು ಜೀವನವಾಗಿಸಿಕೊಂಡಿದ್ದ ಅವರಿಗೆ ಅವರ ಧರ್ಮಪತ್ನಿ ಒತ್ತಾಸೆಯಾಗಿದ್ದರು ಎಂದರು.

ನಾಡಿನ ಅಭಿವೃದ್ಧಿ ಬಗ್ಗೆ ಕಾಳಜಿ ಹೊಂದಿದ್ದ ಪ್ರಾಮಾಣಿಕ ಅಧಿಕಾರಿ : ಪ್ರಧಾನ ಕಾರ್ಯದರ್ಶಿಗಳಾಗಿದ್ದ ಬಿ.ಎಸ್.ಪಾಟೀಲರೊಂದಿಗೆ ಪ್ರವಾಸ ಹೋಗಿದ್ದ ಸಂದರ್ಭದಲ್ಲಿ ನೆರವು ನೀಡುತ್ತಿದ್ದರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ರೈತ ಕುಟುಂಬದಿಂದ ಬಂದು ವಿದ್ಯಾಭ್ಯಾಸ ಮಾಡಿ ಸೈನ್ಯ ಸೇರಿ ನಂತರ  ಐಎಎಸ್ ಅಧಿಕಾರಿಯಾದವರು. ಅವರಲ್ಲಿ ಇಚ್ಚಾಶಕ್ತಿ ಇದ್ದದ್ದರಿಂದ ಅಪಘಾತವಾಗಿದ್ದರೂ ಐಎಎಸ್ ಉತ್ತೀರ್ಣರಾಗಲು ಸಾಧ್ಯವಾಯಿತು. ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿದ್ದಾರೆ.  ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದರು. ನಾಡಿನ ಅಭಿವೃದ್ಧಿ ಬಗ್ಗೆ ಕಾಳಜಿ ಹೊಂದಿದ್ದರು ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು==ಬಸವಣ್ಣಇವನ್ಯಾರವಎನ್ನದಿರಿಎಂದು 850 ವರ್ಷಗಳಹಿಂದೆಯೇಹೇಳಿದ್ದರು. ಸ್ವಾತಂತ್ರ್ಯಬಂದು 79 ವರ್ಷಗಳಾದರೂ 76% ನಾವುಸಾಕ್ಷರತೆಸಾಧಿಸಿದ್ದರೂಜಾತೀಯತೆಹೋಗಿಲ್ಲ. ಸುಶಿಕ್ಷಿತರಲ್ಲೇಜಾತೀಯತೆಯನ್ನುಹೆಚ್ಚಾಗಿಕಾಣುತ್ತಿದ್ದುಇದುಹೋಗಬೇಕಿದೆಸಿದ್ದರಾಮಯ್ಯ , ಮುಖ್ಯಮಂತ್ರಿಗಳು==

Tags: Bharat Ratna Pro CNR Rao 10th Year Science Scholarship Program-2025Breaking News-Gadag:CM karnataka News GadagaGadaga District Hosashake NewsShri B. S. Patil to be conferred with the prestigious Chandana Shri Award for the year 2025The purpose of education is to instill a scientific mindset and rationality: Siddaramaiahಭಾರತ ರತ್ನ ಪ್ರೋ  ಸಿ ಎನ್ ಆರ್ ರಾವ್ 10 ನೇ ವರ್ಷದ ವಿಜ್ಞಾನ ವಿಸ್ಕೃತ ಕಾರ್ಯಕ್ರಮ-2025ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ: ಸಿದ್ದರಾಮಯ್ಯಶ್ರೀ ಬಿ ಎಸ್ ಪಾಟೀಲ ಇವರಿಗೆ 2025 ನೇ ಸಾಲಿನ ಪ್ರತಿಷ್ಠಿತ ಚಂದನ ಶ್ರೀ ಪ್ರಶಸ್ತಿ ಪ್ರಧಾನಹೊಸಶಕೆ ನ್ಯೂಸ್-ಗದಗ:
Previous Post

ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ ಆದಾಲತ್ ನಲ್ಲಿ 6764 ಪ್ರಕರಣಗಳು ಇತ್ಯರ್ಥ

Next Post

ಅನಿಕೇತ ಬಳ್ಳಾರಿಗೆ ಬಾಲವಿಕಾಸ ಅಕಾಡೆಮಿಯ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!