Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳ ಮಹತ್ವವನ್ನು ತಿಳಿದುಕೊಳ್ಳಬೇಕು- ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ

ಜಿಲ್ಲಾಡಳಿತ ಭವನದ ಆವರಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Hosashake News by Hosashake News
August 15, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ
0
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳ ಮಹತ್ವವನ್ನು ತಿಳಿದುಕೊಳ್ಳಬೇಕು- ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ : ಯುವ ಪೀಳಿಗೆ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳ ಮಹತ್ವವನ್ನು ತಿಳಿದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು

ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು. ನಮ್ಮೆಲ್ಲರಿಗೂ ಗೊತ್ತಿರುವ ಹಾಗೆ ಅಸಂಖ್ಯಾತ  ಸ್ವಾತಂತ್ರ್ಯ ಹೋರಾಟಗಾರ ಶ್ರಮದಿಂದ ದೇಶಕ್ಕೆ  ಸ್ವಾತಂತ್ರ್ಯ ಸಿಕ್ಕಿದೆ. ಮಹಾತ್ಮಾ ಗಾಂಧೀಜಿ, ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್, ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಬೇಗಂ ಹಜರತ್ ಮಹಲ್, ತಾತ್ಯಾ ಟೊಪಿ, ನಾನಾ ಸಾಹೇಬ್, ಮಂಗಲ್ ಪಾಂಡೆ, ಚಂದ್ರಶೇಖರ ಆಜಾದ್, ಭಗತ್ ಸಿಂಗ್, ರಾಜಗುರು, ಖುದಿರಾಮ ಬೋಸ್, ಸುಖ ದೇವ, ಹೀಗೆ ಸಹಸ್ರಾರು ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳು ಇತಿಹಾಸದಲ್ಲಿ ಅಜರಾಮರವಾಗಿವೆ ಎಂದರು. ಎಲ್ಲಾ ಮಹನೀಯರ ಹೋರಾಟಗಳ ಪ್ರತಿಯಾಗಿ ನಮ್ಮ ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ದೊರೆಯಿತು,  ಯಾರು ಇತಿಹಾಸವನ್ನು ಓದುವುದಿಲ್ಲ, ಅವರಿಂದ ಇತಿಹಾಸ ನಿರ್ಮಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಯುವ ಪೀಳಿಗೆಗೆ ಹೇಳಿಕೊಡುವ ಕೆಲಸವಾಗಬೇಕಿದೆ. ತಮಗೆಲ್ಲರಿಗೂ ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭಾಶಯಗಳು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿ.ಪಂ. ಸಿಇಒ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿ.ಪಂ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಅಮೀನ್ ಅತ್ತಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಜಿಲ್ಲಾ ವಾರ್ತಾಧಿಕಾರಿ ಜಿ.ಸುರೇಶ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags: Hosashake News KoppalKoppal ಸ್ವಾತಂತ್ರ್ಯ ಹೋರಾಟಗಾರರ ತ್ಯಾಗWe should understand the importance of the sacrifices and sacrifices of freedom fighters - District Collector Suresh Itnalಬಲಿದಾನಗಳ ಮಹತ್ವವನ್ನು ತಿಳಿದುಕೊಳ್ಳಬೇಕು- ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ
Previous Post

79 ನೇ ಸ್ವಾತಂತ್ರ್ಯ ದಿನಾಚರಣೆ ಸಚಿವ ಶಿವರಾಜ ತಂಗಡಗಿ ಅವರಿಂದ ರಾಷ್ಟ್ರ ಧ್ವಜಾರೋಣ

Next Post

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಪ್ರಶಸ್ತಿ ಪುರಸ್ಕೃತರಿಗೆ ಜಿಲ್ಲಾಡಳಿತದಿಂದ ಗೌರವ ಸನ್ಮಾನ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!