ಹೊಸಶಕೆ ನ್ಯೂಸ್ -ಕೊಪ್ಪಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಹುಬ್ಬಳ್ಳಿಯ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಮ್.ಎಸ್.ಎಮ್.ಇ)ರವರ ಸಹಯೋಗದೊಂದಿಗೆ ಟಣಕನಕಲ್ ಗ್ರಾಮದಲ್ಲಿರುವ ಕೊಪ್ಪಳ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾದ ಪಿಎಂ ವಿಶ್ವಕರ್ಮ ಯೋಜನೆಯ ಜಾಗೃತಿ ಅಭಿಯಾನ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಕೆ.ಗವಿಶಂಕರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ದ್ರ ಪುರಸ್ಕೃತ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯು ದೇಶದ ಸಾಂಪ್ರದಾಯಿಕ ಕೆಲೆಗಳಿಗೆ ಉತ್ತೇಜ ನೀಡುವುದರ ಮೂಲಕ ಕುಶಲಕರ್ಮಿಗಳ ಅಭ್ಯುದಯಕ್ಕೆ ನೆರವು ಕಲ್ಪಿಸಲಾಗುತ್ತಿದೆ. ಕಾರ್ಯಕ್ರಮದ ಮೂಲಕ ತಾಂತ್ರಿಕ ಜ್ಞಾನ ಹಾಗೂ ಬ್ಯಾಂಕಿನ ಮೂಲಕ ಸಿಗುವಂತಹ ಸಾಲ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಈ ಅಭಿಯಾನಕ್ಕೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಎಮ್.ಎಸ್.ಎಮ್.ಇ ಸಹಾಯಕ ನಿರ್ದೆಶಕ ಕಿರಣ ಕುಮಾರ್, ಪಿ.ಎಂ ವಿಶ್ವಕರ್ಮ ಜಿಲ್ಲಾ ವ್ಯವಸ್ಥಾಪಕ ಚಂದ್ರಶೇಖರ್, ಜಿಲ್ಲಾ ಕೌಶಲ್ಯ ಮಿಷನ್ ಸಹಾಯಕ ನಿರ್ದೇಶಕ ಮಂಜುನಾಥ ಬೆಲ್ಲದ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ವಿರೇಂದ್ರ ಕುಮಾರ, ತಳಕಲ್‌ನ ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ ಕೌಶಲ್ಯ ಕೇಂದ್ರದ ರಾಜೇಶ್ವರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತರಬೇತಿದಾರರು, ವಿಶ್ವಕರ್ಮ ಸಮಾಜದ ಪದಾದಿಕಾರಿಗಳು, ವಿಶ್ವಕರ್ಮ ಫಲಾನುಭವಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.