ಹೊಸಶಕೆ ನ್ಯೂಸ್-ಕೊಪ್ಪಳ: ಉಕ್ಕು ಕಾರ್ಖಾನೆ ಸ್ಥಾಪನೆಗೆ ನಮ್ಮ ವಿರೋಧವಿದೆ. ನಾನು ಜನರೊಂದಿಗೆ ಇರುತ್ತೇನೆ , ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಿಎಂ ಬಳಿಗೆ ತೆರುಳುವದಾಗಿ ಜಿಲ್ಲಾ ಉಸ್ತುವಾರಿಸ ಚಿವ ಶಿವರಾಜ ತಂಗಡಗಿ ಹೇಳಿದರು.
ನಗರದಲ್ಲಿ ಹಣ್ಣು ಮೇಳ ಉದ್ಘಾಟನೆಯ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರಕಾರ ಕಾರ್ಖಾನೆ ಆರಂಭಕ್ಕೆ ಪರವಾನಗಿ ನೀಡಿರಬಹುದು. ಆದರೆ ಜನರ ವಿರೋಧವಿದೆ. ಈ ಕಾರಣಕ್ಕಾಗಿ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಿಎಂ ಬಳಿ ಹೋಗುತ್ತೇವೆ. ಕಾರ್ಖಾನೆ ಆರಂಭಕ್ಕೆ ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗುವುದು ಎಂದರು.
ಕಾರ್ಖಾನೆಗಾಗಿ ಭೂಮಿ ಕಳೆದುಕೊಂಡವರಿಗೆ ಉದ್ಯೋಗ ಹಾಗೂ ಭೂಮಿ ವಾಪಸ್ ಕೊಡುವ ಬಗ್ಗೆ ನಮ್ಮ ಬಳಿ ಮಾಹಿತಿ ಇಲ್ಲ. ಈ ಹಿಂದೆ ಕಾರ್ಖಾನೆಯಿಂದ ಪರಿಸರ ಹಾನಿ ವರದಿ ಬಗ್ಗೆಯೂ ಮಾಹಿತಿ ಇಲ್ಲ. ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವ ಭರವಸೆ ನೀಡಿದರು.
+++++++++++++
*ಕನಕಗಿರಿಯಲ್ಲಿ ತೋಟಗಾರಿಕೆ ಪಾರ್ಕ್ ನಿರ್ಮಾಣ*ಕ ನಕಗಿರಿಯಲ್ಲಿ ತೋಟಗಾರಿಕೆ ಪಾರ್ಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವ ಸಾಧ್ಯತೆ ಇದೆ.ಹಿಂದಿನ ಸರಕಾರ ಘೋಷಣೆ ಮಾಡಿತ್ತ ಆದರೆ ಅನುದಾನ ನೀಡಿರಲಿಲ್ಲ
ಈಗ ವಿಸ್ತ್ರತ ಯೋಜನಾ ವರದಿ ಸಿದ್ದವಾಗಿದೆ. ತೋಟಗಾರಿಕೆ ಪಾರ್ಕ್ ನಿರ್ಮಿಸಲಾಗುವುದು ಎಂದು ಕನಕಗಿರಿ ಶಾಸಕರು ಆಗಿರುವ ಸಚಿವ ತಂಗಡಗಿ ಹೇಳಿದರು.
================== *ಕೊಪ್ಪಳ ತಾಲೂಕಿನಲ್ಲಿ ಈಗಾಗಲೇ 202ಕ್ಕೂ ಹೆಚ್ಚು ಸಣ್ಣ, ಮಧ್ಯಮ ಹಾಗೂ ಬೃಹತ್ ಕಾರ್ಖಾನೆಗಳಿವೆ. ಅವುಗಳಲ್ಲಿ 20 ಐರನ್ ಆ್ಯಂಡ್ ಸ್ಟಾಂಜ್ ಕಾರ್ಖಾನೆಗಳಿದ್ದು, ಸುತ್ತಲಿನ ಹತ್ತಾರು ಹಳ್ಳಿಗಳಲ್ಲಿ ಪರಿಸರ ನಾಶವಾಗಿದೆ. ಪರಿಸ್ಥಿತಿ ಹೀಗಿರುವಾಗ ಇದೀಗ ಕೊಪ್ಪಳ ನಗರಕ್ಕೆ ಹೊಂದಿಕೊಂಡೇ ಹೊಸ ಕಾರ್ಖಾನೆ ನಿರ್ಮಾಣ ಆಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇದಕ್ಕೆ ಜನಾಕ್ರೋಶ, ಪಕ್ಷಾತೀತ ಬೆಂಬಲ ವ್ಯಕ್ತವಾಗಿದೆ,
ನಾನು ಜನರೊಂದಿಗೆ ಇರುತ್ತೇನೆ, ಈ ಸಂಬಂಧ
‘ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ಸಿಎಂ ಬಳಿ ಹೋಗುತ್ತೇವೆ: ಶಿವರಾಜ್ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವರು*