Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಅವಲೋಕನ

ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುತ್ತಿದೆ: ನಾರಾಯಣಗುರುಗಳ ಆದರ್ಶ ಪ್ರಸ್ತುತ-ಕೆ.ವಿ.ಪ್ರಭಾಕರ್

ಕರಾವಳಿಯಲ್ಲಿ ಧರ್ಮದ ಹೆಸರಲ್ಲಿ ಬಲಿ ಆಗುತ್ತಿರುವವರೆಲ್ಲಾ ಹಿಂದುಳಿದ ಜಾತಿಗಳವರೇ: ಕೆ.ವಿ.ಪಿ ಬೇಸರ

Hosashake News by Hosashake News
November 23, 2025
in ಅವಲೋಕನ, ಕಲೆ-ಸಾಹಿತ್ಯ-ಸಂಸ್ಕೃತಿ, ಜಿಲ್ಲೆ, ದೇಶ, ಪರಿಸರ, ಪ್ರಾದೇಶಿಕ, ರಾಜ್ಯ, ಶಿಕ್ಣಣ-ಆರೋಗ್ಯ, ಸಾಮಾಜಿಕ, ಸುದ್ದಿ
0
ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುತ್ತಿದೆ: ನಾರಾಯಣಗುರುಗಳ ಆದರ್ಶ ಪ್ರಸ್ತುತ-ಕೆ.ವಿ.ಪ್ರಭಾಕರ್
Share on FacebookShare on Twitter

*ನಾರಾಯಣ ಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು  ರೂಪಿಸುವುದಾಗಿತ್ತು  : ಕೆ.ವಿ.ಪ್ರಭಾಕರ್||

*ಐದು ಮಂದಿಗೆ ನಾರಾಯಣ ಗುರು ಪ್ರಶಸ್ತಿ ಪ್ರದಾನ ||

ಹೊಸಶಕೆ ನ್ಯೂಸ್-ಬೆಂಗಳೂರು: ದಿನೇ ದಿನೇ ಜಾತಿ ವ್ಯವಸ್ಥೆ ಗಟ್ಟಿಗೊಳ್ಳುತ್ತಾ, ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುತ್ತಿರುವ ಹೊತ್ತಿನಲ್ಲಿ,  ನಾರಾಯಣ ಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ  ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಆಯೋಜಿಸಿದ್ದ  ಕಾರ್ಯಕ್ರಮದಲ್ಲಿ ಐದು ಮಂದಿಗೆ ನಾರಾಯಣಗುರು ಪ್ರಶಸ್ತಿ ಪ್ರದಾನ ಮಾಡಿ, ಐದು ಸಾಧಕರಿಗೆ ಗೌರವಿಸಿ ಮಾತನಾಡಿದ ಅವರು, ಶೋಷಣೆಗೆ ಒಳಗಾಗುವ ಮನಸ್ಥಿತಿ, ಗುಲಾಮಗಿರಿಯ ಮನಸ್ಥಿತಿಗೆ ನಾರಾಯಣಗುರುಗಳು ನೈಸರ್ಗಿಕ ಚಿಕಿತ್ಸೆ ಕೊಡಲು ಯತ್ನಿಸಿದರು. ಇವರ ಬೋಧನೆಗಳು ಮತ್ತು ಸುಧಾರಣಾ ಕಾರ್ಯಗಳು ಅವತ್ತಿನ‌ ಮತ್ತು ಇವತ್ತಿನ ಹಲವು ಸಾಮಾಜಿಕ ಸಮಸ್ಯೆಗಳಿಗೆ ದಾರಿದೀಪವಾಗಿವೆ ಎಂದರು.

ಒಂದು ಜಾತಿ, ಒಂದು ಮತ, ಒಬ್ಬನೇ ದೇವರು ಮಾನವನಿಗೆ ಎಂದು ಗುರುಗಳು ಕರೆ ಕೊಟ್ಟಿದ್ದರ ಅರ್ಥ ಎಲ್ಲರೂ ನಾರಾಯಣಗುರುಗಳ ಹೆಸರಲ್ಲಿ ಒಂದೊಂದು ದೇವಸ್ಥಾನ ಕಟ್ಟಿ ಅನ್ನುವುದಾಗಿರಲಿಲ್ಲ.  ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಪ್ರವೇಶ ಪಡೆಯಲು ಒದ್ದಾಡುವುದಕ್ಕಿಂತ ನಿಮ್ಮದೇ ದೇವರ ಗುಡಿಯನ್ನು ಸೃಷ್ಟಿಸಿಕೊಳ್ಳಿ ಎನ್ನುವುದಾಗಿತ್ತು.  ನಾರಾಯಣ ಗುರುಗಳು ಶಿವನ ಪ್ರತಿಷ್ಠಾಪನೆ ಮಾಡಿದಾಗ ಜಾತಿವಾದಿಗಳಿಂದ ಬಂದ ವಿರೋಧಕ್ಕೆ ತಣ್ಣಗೆ ಪ್ರತಿಕ್ರಿಯಿಸಿದ್ದ ಗುರುಗಳು, “ಇದು ನಿಮ್ಮ ಶಿವ ಅಲ್ಲ, ಈಳವರ ಶಿವ” ಎಂದು ಅವರ ಬಾಯಿ ಮುಚ್ಚಿಸಿದ್ದರು.

ಬಳಿಕ‌ ಎಲ್ಲರೂ ದೇವಸ್ಥಾನಗಳನ್ನೇ ಕಟ್ಟಲು ಮುಂದಾದಾಗ ಹೆದರಿದ ಗುರುಗಳು ಕೊನೆಗೆ ದೇವಸ್ಥಾನ ಕಟ್ಟಿ ಶಿವನ ಬದಲಿಗೆ ಕನ್ನಡಿಯನ್ನು ಪ್ರತಿಷ್ಠಾಪಿಸಿ ದೇವರು ನಿಮ್ಮೊಳಗೇ ಇದ್ದಾನೆ, ಹೊರಗೆ ಹುಡುಕುವ ಅಗತ್ಯ ಇಲ್ಲ ಎನ್ನುವ ಸಂದೇಶ ನೀಡಿದ್ದರು,  ಇಂದು ಮೀಸಲಾತಿ ಚಳವಳಿ ಜಾತೀಯತೆಯ ಭಾಗವಾಗಿ ನಡೆಯುತ್ತಿದೆ. ಎಲ್ಲಾ ಜಾತಿಯವರಿಗೂ ಮೀಸಲಾತಿ, ಒಳ ಮೀಸಲಾತಿ ಬೇಕಾಗಿದೆ. ಹೀಗಾಗಿ ಇಂದು ಮೀಸಲಾತಿಯ ಹೋರಾಟ ಜಾತಿ ಸಮಾಜವನ್ನು ಗಟ್ಟಿಗೊಳಿಸುವ ಭಾಗವಾಗಿದೆ ಎಂದು  ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ  ಕೆ.ವಿ.ಪ್ರಭಾಕರ್ ವಿವರಿಸಿದರು.

ನಾರಾಯಣಗುರುಗಳು ಶಿಕ್ಷಣದ ಮೂಲಕ ಸ್ವಾತಂತ್ರ್ಯ ಗಳಿಸಿ ಎಂದು ಕರೆ ನೀಡುವುದರ ಹಿಂದೆ ಶಾಲಾ ಶಿಕ್ಷಣದ ಜೊತೆಗೆ ಸಾಮಾಜಿಕ‌ ಶಿಕ್ಷಣವನ್ನೂ ಪಡೆಯುವ ಮೂಲಕ ಶೋಷಕ, ಶೋಷಿತ ಮತ್ತು ಗುಲಾಮಗಿರಿ ಮನಸ್ಥಿತಿಯಿಂದ ಮುಕ್ತಿ ಹೊಂದಿ ಎನ್ನುವುದಾಗಿತ್ತು. ಆದರ್ಶಗಳನ್ನು ಅಳಿಸಿ ಕೇವಲ ಮಾತುಗಳಿಗೆ ಮಾತ್ರ ಮಾನ್ಯತೆ ನೀಡಿದರೆ ಅಪಾರ್ಥದ ಆಚರಣೆಗಳಿಗೆ ದಾರಿ ಮಾಡಿ ಕೊಡುತ್ತದೆ. ಅಂಬೇಡ್ಕರ್, ನಾರಾಯಣಗುರುಗಳು ಮೀಸಲಾತಿಯನ್ನು ಜಾತ್ಯತೀತ ಸಮಾಜ ನಿರ್ಮಾಣದ ಭಾಗವಾಗಿ ಬೆಂಬಲಿಸಿದ್ದರು ಎಂದು ಹೇಳಿದರು

ಧಾರ್ಮಿಕ ಸಹಿಷ್ಣುತೆ ಮತ್ತು ವಿಶ್ವಬಂಧುತ್ವವನ್ನು ಆಚರಿಸುವ ಮೂಲಕ ನಾರಾಯಣಗುರುಗಳ ಆದರ್ಶಗಳಿಗೆ ನಾವು ಚೈತನ್ಯ ತುಂಬಬೇಕಿದೆ,  ಯಾವುದೇ ಧರ್ಮವಿರಲಿ, ಮನುಷ್ಯನನ್ನು ಉತ್ತಮಗೊಳಿಸಿದರೆ ಸಾಕು ಎನ್ನುವುದು ಅವರ ವಿಶಾಲ ದೃಷ್ಟಿಕೋನವಾಗಿತ್ತು. ಎಲ್ಲಾ ರೀತಿಯ ತಾರತಮ್ಯದ ಮನಸ್ಥಿತಿಯಿಂದ ಮುಕ್ತವಾದ ಅಪ್ಪಟ ಮನುಷ್ಯನನ್ನು ರೂಪಿಸುವುದೇ ನಾರಾಯಣ ಗುರುಗಳ ಬದುಕಿನ‌ ಸಂದೇಶವಾಗಿತ್ತು ಎನ್ನುವುದನ್ನು ನಾವುಗಳು ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ  ಕೆ.ವಿ.ಪ್ರಭಾಕರ್ ಅವರು ಹೇಳಿದರು. ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುವಾಗ ನಾರಾಯಣ ಗುರುಗಳ ಆದರ್ಶ ಪ್ರಸ್ತುತ ಆಗುತ್ತದೆ , ಒಂದು ಜಾತಿ, ಒಂದು ಮತ, ಒಬ್ಬನೇ ದೇವರು ಮಾನವನಿಗೆ ಎನ್ನುವುದು ಅವರ ಪ್ರಸಿದ್ಧ ಘೋಷಣೆಯಾಗಿತ್ತು.‌ ಹಾಗೆಯೇ, ಶಿಕ್ಷಣದಿಂದ ಸ್ವಾತಂತ್ರ್ಯವನ್ನು ಗಳಿಸಿ ಎನ್ನುವುದು ಅವರ ಪ್ರಮುಖ ಕರೆಯಾಗಿತ್ತು. ಇಂದು ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಧರ್ಮದ ಹೆಸರಲ್ಲಿ ತಮ್ಮ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವವರೆಲ್ಲಾ ಬಿಲ್ಲವ, ಈಳವ ಮತ್ತು ಈಡಿಗ, ಬೆಸ್ತ ಸಮುದಾಯಗಳ ಮಕ್ಕಳೇ ಆಗಿದ್ದಾರೆ. ಇವರಿಗೆ ನಾರಾಯಣಗುರುಗಳ ಬದುಕಿನ ಪಾಠವನ್ನು ಅರ್ಥ ಮಾಡಿಸಬೇಕಾದ ತುರ್ತು ಇದೆ.: ಕೆ.ವಿ.ಪ್ರಭಾಕರ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರು==

Tags: All those being sacrificed in the name of religion on the coast belong to backward castes: KVP upsetBangalore Karnataka Backward Classes Recognized Editors and Reporters AssociationBangalore ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘHosashake Bangalore NewsNarayana Guru's life was about shaping genuine human beings: K.V. PrabhakarThe ideal of Narayana Guru is present-K.V. Prabhakarಕರಾವಳಿಯಲ್ಲಿ ಧರ್ಮದ ಹೆಸರಲ್ಲಿ ಬಲಿ ಆಗುತ್ತಿರುವವರೆಲ್ಲಾ ಹಿಂದುಳಿದ ಜಾತಿಗಳವರೇ: ಕೆ.ವಿ.ಪಿ ಬೇಸರನಾರಾಯಣ ಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು  : ಕೆ.ವಿ.ಪ್ರಭಾಕರ್ನಾರಾಯಣಗುರುಗಳ ಆದರ್ಶ ಪ್ರಸ್ತುತ-ಕೆ.ವಿ.ಪ್ರಭಾಕರ್
Previous Post

ಪರಿಸರ ಉಳಿಯಲಿ ಗಾಂಧಿ ಬಳಗದಿಂದ ಮೌನ ಉಪವಾಸ ಸತ್ಯಾಗ್ರಹ

Next Post

ವಿಶ್ವ ಶೌಚಾಲಯ ದಿನಾಚರಣೆ – ನಮ್ಮ ಶೌಚಾಲಯ ನಮ್ಮ ಭವಿಷ್ಯ ಅಭಿಯಾನ ಯಶಸ್ವಿಗೊಳಿಸಿ: ಜಿಪಂ ಸಿಇಒ ವರ್ಣಿತ್ ನೇಗಿ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!