Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ವಿಶ್ವ ಶೌಚಾಲಯ ದಿನಾಚರಣೆ – ನಮ್ಮ ಶೌಚಾಲಯ ನಮ್ಮ ಭವಿಷ್ಯ ಅಭಿಯಾನ ಯಶಸ್ವಿಗೊಳಿಸಿ: ಜಿಪಂ ಸಿಇಒ ವರ್ಣಿತ್ ನೇಗಿ

Hosashake News by Hosashake News
November 23, 2025
in ಜಿಲ್ಲೆ, ದೇಶ, ಪರಿಸರ, ಪ್ರಾದೇಶಿಕ, ರಾಜ್ಯ, ಶಿಕ್ಣಣ-ಆರೋಗ್ಯ, ಸಾಮಾಜಿಕ, ಸುದ್ದಿ
0
ವಿಶ್ವ ಶೌಚಾಲಯ ದಿನಾಚರಣೆ – ನಮ್ಮ ಶೌಚಾಲಯ ನಮ್ಮ ಭವಿಷ್ಯ ಅಭಿಯಾನ ಯಶಸ್ವಿಗೊಳಿಸಿ: ಜಿಪಂ ಸಿಇಒ ವರ್ಣಿತ್ ನೇಗಿ
Share on FacebookShare on Twitter

ಡಿಸೆಂಬರ್ 10ರ ವರೆಗೆ  ಗ್ರಾಮೀಣ ಸಮುದಾಯದಲ್ಲಿ ಸುರಕ್ಷಿತ ನೈರ್ಮಲ್ಯ ಶುಚಿತ್ವ ಕುರಿತು ಜಾಗೃತಿ ಕಾರ್ಯಕ್ರಮ

ಹೊಸಶಕೆ ನ್ಯೂಸ್-ಕೊಪ್ಪಳ: ವಿಶ್ವ ಶೌಚಾಲಯ ದಿನಾಚರಣೆಯ ನಿಮಿತ್ತ ಡಿಸೆಂಬರ್ 10ರ ವರೆಗೆ ಹಮ್ಮಿಕೊಳ್ಳಲಾದ “ನಮ್ಮ ಶೌಚಾಲಯ ನಮ್ಮ ಭವಿಷ್ಯ” ಅಭಿಯಾನವನ್ನು ಯಶಸ್ವಿಗೊಳಿಸುವಂತೆ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ.      ಗ್ರಾಮೀಣ ಸಮುದಾಯದಲ್ಲಿ ಸುರಕ್ಷಿತ ನೈರ್ಮಲ್ಯ ಶುಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಾಲಯಗಳನ್ನು ನಿರಂತರವಾಗಿ ಬಳಸುವಂತೆ ಪ್ರೇರೇಪಿಸುವ ಉದ್ದೇಶದೊಂದಿಗೆ ಪ್ರತಿ ವರ್ಷ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ದಿನಾಚರಣೆಯು ಬಯಲು ಬಹಿರ್ದೆಸೆ ಮುಕ್ತ ಸ್ಥಿತಿಯ ಸ್ಥಾನಮಾನವನ್ನು ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಈ ನಿಟ್ಟಿನಲ್ಲಿ ಜಲ ಶಕ್ತಿ ಸಚಿವಾಲಯದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿಶ್ವ ಶೌಚಾಲಯ ದಿನಾಚರಣೆಯ ಪ್ರಯುಕ್ತ “19ನೇ ನವೆಂಬರ್ 2025 ರಿಂದ 10ನೇ ಡಿಸೆಂಬರ್ 2025ರ” ವರೆಗೆ “ನಮ್ಮ ಶೌಚಾಲಯ-ನಮ್ಮ ಭವಿಷ್ಯ” ಎಂಬ ಶೀರ್ಷಿಕೆಯಡಿ ವಿಶೇಷ ಅಭಿಯಾನವನ್ನು ಆಯೋಜಿಸಲು ನಿರ್ದೇಶನ ನೀಡಿರುವ ಪ್ರಯುಕ್ತ ಈ ಅಭಿಯಾನವನ್ನು ಕೊಪ್ಪಳ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನಲೆಯಲ್ಲಿ ಈ ಅಭಿಯಾನವು ಆರೋಗ್ಯ, ಘನತೆ ಮತ್ತು ಸಾಮಾಜಿಕ ಸಮೃದ್ಧಿಗಾಗಿ ನೈರ್ಮಲ್ಯ ಮತ್ತು ಸ್ವಚ್ಛತೆಯ ಪ್ರಾಮುಖ್ಯತೆಯ ಮೇಲೆ ಮಾತ್ರವಲ್ಲದೆ, ವೈಯಕ್ತಿಕ ಮನೆ ಶೌಚಾಲಯಗಳು ಮತ್ತು ಸಮುದಾಯದ ನೈರ್ಮಲ್ಯ ಸಂಕೀರ್ಣಗಳು ಎರಡಕ್ಕೂ ಸಂಬಂಧಿಸಿದಂತೆ, ಕಾರ್ಯಕ್ಷಮತೆಯ ಮೌಲ್ಯಮಾಪನ ಮತ್ತು ಗ್ರಾಮೀಣ ಶೌಚಾಲಯಗಳ ಸೌಂದರ್ಯ ವರ್ಧನೆಯಂತಹ ಅಂಶಗಳಿಗೂ ಒತ್ತು ನೀಡುತ್ತದೆ.

 ಈ ಅವಧಿಯಲ್ಲಿ ಗ್ರಾಮ ಪಂಚಾಯತಿಗಳು, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗಳು ಒಗ್ಗೂಡಿ ಸಮುದಾಯ ಶೌಚಾಲಯ ಸಂಕೀರ್ಣಗಳ ಕಾರ್ಯಕ್ಷಮತೆ, ಕಾರ್ಯಾಚರಣೆ ಮತ್ತು ನಿರ್ವಹಣಾ ವ್ಯವಸ್ಥೆಗಳನ್ನು ಮೌಲ್ಯಮಾಪನ ಮಾಡಲು ಮತ್ತು ಹೆಚ್ಚಿಸಲು ಕ್ರಮವಹಿಸುವುದರ ಜೊತೆಗೆ ಜಿಲ್ಲೆ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ವಿವಿಧ ಜನ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡು ಗ್ರಾಮೀಣ ಸಮುದಾಯದಲ್ಲಿ ಶೌಚಾಲಯ ಬಳಕೆ ಮತ್ತು ಉತ್ತಮ ನೈರ್ಮಲ್ಯ ಅಭ್ಯಾಸಗಳನ್ನು ಉತ್ತೇಜಿಸಲು ಕ್ರಮವಹಿಸಲು ತಿಳಿಸಿದೆ.

ಮುಂದುವರೆದು, ಸಮುದಾಯದ ಸ್ವಚ್ಛ ಆರೋಗ್ಯಕರ ಮತ್ತು ಸಮ್ಮದ ಭವಿಷ್ಯಕ್ಕಾಗಿ ಸಂಪೂರ್ಣ ಸ್ವಚ್ಛತೆಯನ್ನು ಖಚಿತಪಡಿಸಿಕೊಳ್ಳಲು, ಗಣ್ಯ ವ್ಯಕ್ತಿಗಳು, ಹಿರಿಯ ನಾಗರಿಕರು, ಮಕ್ಕಳು, ಯುವಕರು, ಸ್ವ-ಸಹಾಯ ಗುಂಪುಗಳು (SHGs) ಇತ್ಯಾದಿಗಳನ್ನು ಒಳಗೊಂಡಿರುವ ಜನರ ಸಹಭಾಗಿತ್ವ (Jan Bhagidari) ಮೂಲಕ ಸಮುದಾಯಗಳಲ್ಲಿ ಕೇಂದ್ರೀಕೃತ ಜಾಗೃತಿ ಮೂಡಿಸುವ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ಕ್ರಮವಹಿಸುವುದು.   ವಿಶ್ವ ಶೌಚಾಲಯ ದಿನಾಚರಣೆಯ ಪ್ರಯುಕ್ತ 19ನೇ ನವೆಂಬರ್ 2025 ರಿಂದ 10ನೇ ಡಿಸೆಂಬರ್ 2025ರವರೆಗೆ “ನಮ್ಮ “ಶೌಚಾಲಯ-ನಮ್ಮ ಭವಿಷ್ಯ” ಅಭಿಯಾನವನ್ನು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಯಶಸ್ವಿಯಾಗಿ ಹಮ್ಮಿಕೊಂಡು ಅದರ ವರದಿಯನ್ನು ಕೇಂದ್ರ ಜಲಶಕ್ತಿ ಸಚಿವಾಲಯದ ಪ್ರೋಟಲ್‌ನಲ್ಲಿ ಆರೋಹಿಸಲು ಕ್ರಮವಹಿಸಿ ಎಂದು ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿ.ಪಂ ಸಿಇಒ ಅವರು ಸೂಚನೆ ನೀಡಿದ್ದಾರೆ.

ಈ ಅಭಿಯಾನದಲ್ಲಿ ಗ್ರಾಮ ಪಂಚಾಯತಿಯ ಜೊತೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಯುವಕರು, ಹಿರಿಯರು, ಮಹಿಳೆಯರು, ಸ್ವ-ಸಹಾಯ ಸಂಘದ ಸದಸ್ಯರುಗಳು, ಶಾಲಾ & ಕಾಲೇಜಗಳು, ಅವರಿವರೆನ್ನದೆ ಎಲ್ಲ ಸಾರ್ವಜನಿಕರು ತಮ್ಮ ಪರಿವಾರದೊಂದಿಗೆ ಈ ಅಭಿಯಾನದಲ್ಲಿ ಭಾಗವಹಿಸಿ ಈ ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿಸಲು ಭಾಗಿದಾರರಾಗಬೇಕು ಎಂದು  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ.

Tags: Karnataka news HosashakeKoppal :World Toilet Day - Our Toilet Our Future Campaign: ZP CEO Varnit NegiKoppal Awareness program on safe sanitation and hygiene in rural communitiesKoppal Hosashake daily newsKoppal ZP ಗ್ರಾಮೀಣ ಸಮುದಾಯದಲ್ಲಿ ಸುರಕ್ಷಿತ ನೈರ್ಮಲ್ಯ ಶುಚಿತ್ವ ಕುರಿತು ಜಾಗೃತಿ ಕಾರ್ಯಕ್ರಮSteps to promote toilet use and good hygiene practices in rural communities::ZP CEO Varnait Negi Koppalಗ್ರಾಮೀಣ ಸಮುದಾಯದಲ್ಲಿ ಶೌಚಾಲಯ ಬಳಕೆ ಮತ್ತು ಉತ್ತಮ ನೈರ್ಮಲ್ಯ ಅಭ್ಯಾಸಗಳನ್ನು ಉತ್ತೇಜಿಸಲು ಕ್ರಮವಿಶ್ವ ಶೌಚಾಲಯ ದಿನಾಚರಣೆ - ನಮ್ಮ ಶೌಚಾಲಯ ನಮ್ಮ ಭವಿಷ್ಯ ಅಭಿಯಾನ : ಜಿಪಂ ಸಿಇಒ ವರ್ಣಿತ್ ನೇಗಿ
Previous Post

ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುತ್ತಿದೆ: ನಾರಾಯಣಗುರುಗಳ ಆದರ್ಶ ಪ್ರಸ್ತುತ-ಕೆ.ವಿ.ಪ್ರಭಾಕರ್

Next Post

ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರದ ಕಲಾ ಜಾಥಾಕ್ಕೆ ಚಾಲನೆ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!